ಬೆಂಗಳೂರು:ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಮನೆ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ, 10,440 ಲೀಟರ್ ಮದ್ಯ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.
ಅಬಕಾರಿ ಇಲಾಖೆ ದಾಳಿ, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವ ಅಂದರ್ - ಅಕ್ರಮ ಮದ್ಯ ಮಾರಾಟ
ಅಬಕಾರಿ ನಿರೀಕ್ಷಕಿ ಸೌಮ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ದಾಳಿ ನಡೆಸಿ 10,440 ಲೀಟರ್ ಮದ್ಯ ವಶಕ್ಕೆ ಪಡೆದು, ಆರೋಪಿಯನ್ನು ಬಂಧಿಸಲಾಗಿದೆ.
ಬಂಧನ
ದೇವನಹಳ್ಳಿ ತಾಲೂಕು ಭೈಜಾಪುರ ಗ್ರಾಮದ ನಿವಾಸಿ ಗೋಪಾಲ್ ಮನೆಯಲ್ಲಿ ಮದ್ಯ ಸಂಗ್ರಹಿಸಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಪಡೆದು ದೇವನಹಳ್ಳಿ ಅಬಕಾರಿ ನಿರೀಕ್ಷಕಿ ಸೌಮ್ಯ ನೇತೃತ್ವದಲ್ಲಿ ದಾಳಿ ನಡೆಸಿದರು.
ದಾಳಿ ವೇಳೆ ಅಕ್ರಮವಾಗಿಟ್ಟಿದ್ದ ಮದ್ಯವನ್ನು ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.