ಬೆಂಗಳೂರು:ಬಾರ್ ಅಂಡ್ ರೆಸ್ಟೋರೆಂಟ್ ಲೈಸೆನ್ಸ್ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಅಬಕಾರಿ ಇನ್ಸ್ಪೆಕ್ಟರ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೆಂಗೇರಿ ವಲಯದ ಅಬಕಾರಿ ಇನ್ಸ್ಪೆಕ್ಟರ್ ಮಂಜುನಾಥ್ ಬಂಧಿತ ಅಧಿಕಾರಿಯಾಗಿದ್ದಾರೆ.
ಸಿ.ಎಲ್ 7 ಲೈಸೆನ್ಸ್ಗೆ ಬಾರ್ ಮಾಲೀಕರೊಬ್ಬರು ಅರ್ಜಿ ಸಲ್ಲಿಸಿದ್ದರು. ಅಬಕಾರಿ ಆಯುಕ್ತರು ಪರಿಶೀಲಿಸಿ ಅಬಕಾರಿ ಇನ್ಸ್ಪೆಕ್ಟರ್ಗೆ ಅರ್ಜಿ ವರ್ಗಾಯಿಸಿದ್ದರು. ಇನ್ಸ್ಪೆಕ್ಟರ್ ಮಂಜುನಾಥ್ ಅನುಮತಿ ನೀಡಲು 15 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬಾರ್ ಮಾಲೀಕ ಅಪರಾಧ ಪತ್ತೆ ದಳದ ಅಧಿಕಾರಿಗಳಿಗೆ ದೂರು ನೀಡಿದ್ದರು.