ಬೆಂಗಳೂರು :ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರ ವಾರಾಂತ್ಯದ ಲಾಕ್‌ಡೌನ್ ಘೋಷಿಸಿದೆ. ಹೀಗಾಗಿ, ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗಿನವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಹಿತದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಎಲ್ಲ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.