ಬೆಂಗಳೂರು: ಕೋವಿಡ್ ಎರಡನೇ ಅಲೆ ಉಲ್ಬಣಿಸುತ್ತಿರುವ ಹಿನ್ನೆಲೆ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.
ಕೊರೊನಾ ಎಫೆಕ್ಟ್: ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ
ಹೆಚ್ಚುತ್ತಿರುವ ಕೊರೊನಾ ಹಿನ್ನೆಲೆ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.
ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯಿಂದ ವಿನಾಯಿತಿ
ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ, ಅಧಿಕಾರಿಗಳ ಆರೋಗ್ಯ ದೃಷ್ಟಿಯಿಂದ ತಾತ್ಕಾಲಿಕವಾಗಿ ಬಯೋಮೆಟ್ರಿಕ್ ಹಾಜರಾತಿ ನಮೂದಿಸುವುದರಿಂದ ವಿನಾಯಿತಿ ನೀಡಲಾಗಿದೆ.
ಆಯಾ ಇಲಾಖೆಗಳ ಮೇಲಾಧಿಕಾರಿಗಳ ಸೂಚನೆಯಂತೆ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳು ಹಾಜರಾತಿ ಪುಸ್ತಕದಲ್ಲಿ ಸಹಿ ಹಾಕುವಂತೆ ಸೂಚಿಸಲಾಗಿದೆ.