ಬೆಂಗಳೂರು: ರಾಜದಾನಿಯನಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ಇದರ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 34.1 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇದೆ. ಶನಿವಾರ ಒಂದೇ ದಿನ 51 ಮಿ.ಮೀ. ಮಳೆಯಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 34.4 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ಉಷ್ಣಾಂಶ 19.8 ಡಿಗ್ರಿ ಸೆಲ್ಸಿಯಸ್ ಇದೆ. ಇಲ್ಲಿ 23.4 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇದೆ. 22.4 ಮಿ.ಮೀ. ಮಳೆಯಾಗಿದೆ.