ಕರ್ನಾಟಕ

karnataka

ETV Bharat / state

ಕಾಂಗ್ರೆಸ್ ಸರ್ಕಾರದಲ್ಲಿ ದುಬಾರಿ ದುನಿಯಾ, ಬೆಲೆ ಏರಿಕೆಯೇ ಆರನೇ ಗ್ಯಾರಂಟಿ: ಬೊಮ್ಮಾಯಿ

ರಾಜ್ಯ ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು, ಜನತೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Aug 1, 2023, 6:10 PM IST

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ‌ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್ ದರ ಏರಿಕೆ, ಟೊಮೆಟೊ ಸಮೇತ ಎಲ್ಲ ತರಕಾರಿ ಬೆಲೆ ಏರಿಕೆ, ನಂದಿನಿ ಹಾಲು, ಮೊಸರು, ಮಜ್ಜಿಗೆ ಬೆಲೆ ಏರಿಕೆ, ಹೋಟೆಲ್​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ, ಬಜೆಟ್​ನಲ್ಲಿ ಅಬಕಾರಿ ತೆರಿಗೆ ಹೆಚ್ಚಳ, ಮೋಟಾರ್ ವೆಹಿಕಲ್ ತೆರಿಗೆ ಹೆಚ್ಚಳ, ಸ್ಟ್ಯಾಂಪ್ ಡ್ಯೂಟಿ ಹೆಚ್ಚಳ ಮೂಲಕ ಬರುವಂತ ದಿನಗಳಲ್ಲಿ ಮತ್ತಷ್ಟು ಬೆಲೆ ಏರಿಕೆಯಾಗಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುನಿಯಾ ದುಬಾರಿಯಾಗಿದ್ದು, ಜನತೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ದಲಿತರಿಗೆ ದ್ರೋಹ : ರಾಜ್ಯ ಸರ್ಕಾರ ಅವೈಜ್ಞಾನಿಕವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಲು ಹೊರಟಿದ್ದು, ರಾಜ್ಯದ ಅಭಿವೃದ್ಧಿಯ ಕಥೆ ಅಯೋಮಯವಾಗಲಿದೆ. ಎಸ್ಸಿಪಿ ಟಿಎಸ್​ಪಿ ಕಾಯ್ದೆಯಡಿ ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮೀಸಲಿಟ್ಟ ಅನುದಾನದಲ್ಲಿ ಸುಮಾರು 11 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡುತ್ತಿದ್ದು, ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗೆ ಮಾರಕವಾಗಲಿದೆ ಎಂದಿದ್ದಾರೆ.

ರಾಜ್ಯ ಸರ್ಕಾರ ಎಸ್ಸಿಪಿ, ಟಿಎಸ್ಪಿ ಯೋಜನೆಗೆ 34 ಸಾವಿರ ಕೋಟಿ ಬದಲು ಕೇವಲ 23 ಸಾವಿರ ಕೋಟಿ ರೂ.ಗೆ ಅನುಮೋದನೆ ನೀಡಿದಂತಾಗಿದ್ದು, ಇದು ಎಸ್ಸಿಪಿ ಕಾಯ್ದೆಯ ಉಲ್ಲಂಘನೆಯ ಜೊತೆಗೆ ಆ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ದ್ರೋಹವಾಗಿದೆ ಎಂದು ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ‌.

ಎಸ್ಸಿ ಎಸ್ಟಿ ಸಮುದಾಯದ ಬಗ್ಗೆ ಕಾಂಗ್ರೆಸ್​ಗೆ ನಿರ್ಲಕ್ಷ್ಯ ಧೋರಣೆ : ಸಮಾಜ ಕಲ್ಯಾಣ ಸಚಿವ ಡಾ.‌ ಎಚ್.‌ ಸಿ ಮಹದೇವಪ್ಪ ಅವರು ಮನಸಿಲ್ಲದೇ ಎಸ್ಸಿಪಿ, ಟಿಎಸ್ಪಿ ಹಣ ವರ್ಗಾವಣೆಗೆ ಒಪ್ಪಿಕೊಂಡಿರುವುದಾಗಿ ಅಸಹಾಯಕತೆ ತೋರಿಸಿರುವುದು ಸರ್ಕಾರದ ನಡೆಯ ಬಗ್ಗೆ ಎಸ್ಸಿ, ಎಸ್ಟಿ ಸಮುದಾಯಕ್ಕಿರುವ ಅಸಮಾಧಾನ ತೋರಿಸುತ್ತದೆ. ಇನ್ನೊಂದೆಡೆ ಎಸ್ಸಿ, ಎಸ್ಟಿ ಸಮುದಾಯದ ಬಗ್ಗೆ ಕಾಂಗ್ರೆಸ್​ಗೆ ಇರುವ ನಿರ್ಲಕ್ಷ್ಯ ಧೋರಣೆ ಎತ್ತಿ ತೋರಿಸುತ್ತದೆ ಎಂದು ಆರೋಪಿಸಿದ್ದಾರೆ.

ಹಾಲು, ತರಕಾರಿ ಬೆಲೆ ಏರಿಕೆ :ಇನ್ನೊಂದೆಡೆ ಬೆಲೆ ಏರಿಕೆಯ ಭಾರಕ್ಕೆ ಬೆಂಡಾಗಿರುವ ರಾಜ್ಯದ ನಾಗರಿಕರಿಗೆ ಇಂದಿನಿಂದ (ಆ. 1) ಹಾಲಿನ ಬೆಲೆ ಏರಿಕೆ ಹೊಸದಾಗಿ ಬಿಸಿ ಮುಟ್ಟಿಸಿದೆ. ಈಗಾಗಲೇ ಟೊಮೆಟೊ ಜತೆಯಲ್ಲೇ ಹಲವು ತರಕಾರಿ ಬೆಲೆ ಗಗನಕ್ಕೇರಿದೆ. ಇವುಗಳ ಜತೆ ಬಹುತೇಕ ಎಲ್ಲಾ ಅಗತ್ಯ ವಸ್ತುಗಳು ತುಟ್ಟಿಯಾಗಿವೆ. ಈ ಮಧ್ಯೆ ಇವತ್ತು ಬೆಳಗ್ಗೆಯಿಂದ ಹಾಲಿನ ದರ ಹೆಚ್ಚಳವಾಗಲಿದ್ದು, ಜನ ಹೊಸದಾಗಿ ಇನ್ನಷ್ಟು ಆರ್ಥಿಕ ಹೊರೆ ಹೊರಲು ಸಿದ್ಧವಾಗಬೇಕಿದೆ. ಏಕೆಂದರೆ ಈ ಏರಿಕೆಯ ಬೆನ್ನಲ್ಲೇ ಹೋಟೆಲ್‌ಗಳಲ್ಲಿ ಚಹಾ-ಕಾಫಿ ದರ ಶೇ.10ರಷ್ಟು ಹೆಚ್ಚಾಗಿದೆ.

ಇದನ್ನೂ ಓದಿ:ಹಾಲು, ತರಕಾರಿ ಬೆಲೆ ಏರಿಕೆ; ಇನ್ನಷ್ಟು ಬಿಸಿಯಾಗಲಿದೆ ಟಿ-ಕಾಫಿ; ಹೊಟ್ಟೆ ಉರಿಸಲಿವೆ ಬೇಕರಿ ತಿಂಡಿ

ABOUT THE AUTHOR

...view details