ಕರ್ನಾಟಕ

karnataka

ETV Bharat / state

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಜೆಡಿಎಸ್​ನಿಂದ ಇಬ್ಬರು ಶಾಸಕರ ಉಚ್ಚಾಟನೆ - ಜೆಡಿಎಸ್​ನಿಂದ ಶಾಸಕ ಗುಬ್ಬಿ ಶ್ರೀನಿವಾಸ್ ಉಚ್ಚಾಟನೆ

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲಿ ಗುಬ್ಬಿ ಶಾಸಕ ಶ್ರೀನಿವಾಸ್ ಹಾಗೂ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಅವರನ್ನು ಜೆಡಿಎಸ್​ನಿಂದ ಉಚ್ಚಾಟನೆ ಮಾಡಲಾಗಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶಾಸಕ ಗುಬ್ಬಿ ಶ್ರೀನಿವಾಸ್ ಉಚ್ಚಾಟನೆ
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಶಾಸಕ ಗುಬ್ಬಿ ಶ್ರೀನಿವಾಸ್ ಉಚ್ಚಾಟನೆ

By

Published : Jun 22, 2022, 6:20 PM IST

Updated : Jun 22, 2022, 7:14 PM IST

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ (ವಾಸು) ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಸಂಜೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶೆಂಪೂರ ಅವರು ಈ ಕುರಿತು ಮಾತನಾಡಿ, ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ನಾಳೆ ಅಥವಾ ನಾಡಿದ್ದರ ಒಳಗಾಗಿ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದರು.

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಜೆಡಿಎಸ್​ನಿಂದ ಇಬ್ಬರು ಶಾಸಕರ ಉಚ್ಚಾಟನೆ

ಸಭೆಯಲ್ಲಿ ಸುದೀರ್ಘ ಚರ್ಚೆ: ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಬೆಳೆವಣಿಗೆಗಳ ಬಗ್ಗೆ ಕೊಟ್ ಕಮಿಟಿ ಸಭೆಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಯಿತು. ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಜಪ್ರುಲ್ಲಾ ಖಾನ್, ಎಂ.ಕೃಷ್ಣಾರೆಡ್ಡಿ, ರಾಜಾ ವೆಂಕಟಪ್ಪ ನಾಯಕ, ಕೆ.ಎಂ. ತಿಮ್ಮರಾಯಪ್ಪ, ಟಿ.ಎ. ಶರವಣ, ಶಾರದಾ ಪೂರ್ಯನಾಯಕ್, ರೂತ್ ಮನೋರಮಾ ಹಾಗೂ ಕೋರ್ ಕಮಿಟಿ ಸಂಚಾಲಕರಾದ ಕೆ.ಎನ್. ತಿಪ್ಪೇಸ್ವಾಮಿ ಅವರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಹೆಚ್.ಡಿ. ದೇವೇಗೌಡರು ಹಾಗೂ ಹೆಚ್.ಡಿ. ಕುಮಾರಸ್ವಾಮಿ ಅವರು ಕೆಲವು ಮಹತ್ವದ ಅಂಶಗಳ ಬಗ್ಗೆ ಪಕ್ಷದ ಪ್ರಮುಖರಿಗೆ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.

Last Updated : Jun 22, 2022, 7:14 PM IST

For All Latest Updates

TAGGED:

ABOUT THE AUTHOR

...view details