ಬೆಂಗಳೂರು:ರಾಜ್ಯದಲ್ಲಿರುವ ಕೃಷಿ ವಿಶ್ವವಿದ್ಯಾಲಯಗಳ ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿಯನ್ನು ವಿಸ್ತರಿಸುವಂತೆ ಎಲ್ಲಾ ವಿವಿಯ ಸದಸ್ಯರು ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ವಿಶ್ವವಿದ್ಯಾಲಯಗಳ ನಾಮನಿರ್ದೇಶಿತ ಸದಸ್ಯರ ಪದಾವಧಿಯು ಪ್ರಸ್ತುತ 3 ವರ್ಷವಿದ್ದು, ಇದನ್ನು 4 ವರ್ಷಕ್ಕೆ ಹೆಚ್ಚಿಸಬೇಕೆಂದು ವಿಕಾಸಸೌಧದ ಕಚೇರಿಯಲ್ಲಿ ಮನವಿ ಮಾಡಲಾಯಿತು.
ತಮಿಳುನಾಡು ಕೃಷಿ ವಿಶ್ವವಿದ್ಯಾಲಯ, ಕೊಯಂಬತ್ತೂರಿನಲ್ಲಿ ಕುಲಪತಿಗಳು ಹಾಗೂ ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿ ನಾಲ್ಕು ವರ್ಷವಿದೆ. ಆದರೆ ರಾಜ್ಯದಲ್ಲಿ ನೂತನ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳ ಅಧಿನಿಯಮ 2009 ರಲ್ಲಿ ಜಾರಿಗೆ ಬಂದ ನಂತರ ಕುಲಪತಿಗಳ ಪದಾವಧಿಯನ್ನು ವಿಶ್ವವಿದ್ಯಾಲಯದ ಆಡಳಿತ ಹಾಗೂ ಅಭಿವೃದ್ಧಿಯ ಹಿತದೃಷ್ಟಿಯಿಂದ 3 ವರ್ಷಗಳಿಂದ 4 ವರ್ಷಗಳಿಗೆ ಹೆಚ್ಚಿಸಲಾಗಿದೆ. ಆದರೆ ವ್ಯವಸ್ಥಾಪನಾ ಮಂಡಳಿಯ ನಾಮನಿರ್ದೇಶಿತ ಸದಸ್ಯರ ಪದಾವಧಿಯನ್ನು 3 ವರ್ಷಗಳಿಗೆ ಸೀಮಿತಗೊಳಿಸಿ, ಯಾವುದೇ ಪ್ರಾಧಿಕಾರಕ್ಕೆ ಮುಂದಿನ ಅವಧಿಗೆ ಮರುನಿಯೋಜನೆಗೂ ಅವಕಾಶವಿಲ್ಲ.