ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸುವ ಸಿಇಟಿ ಪರೀಕ್ಷೆಯು ಆಗಸ್ಟ್ ಅಂತ್ಯದಲ್ಲಿ ನಡೆಯಲಿದೆ. ಪರೀಕ್ಷೆ ಬರೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಕೆಯ ಜತೆಗೆ ಶುಲ್ಕ ಪಾವತಿಯನ್ನು ಜುಲೈ 19ರವರೆಗೂ ಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಕೆಇಎ (ಕರ್ನಾಟಕದ ಪರೀಕ್ಷಾ ಪ್ರಾಧಿಕಾರ)ಕ್ಕೆ ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ಮಾಡಿದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ವಿಶೇಷ ವರ್ಗದ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಜುಲೈ 14 ರಿಂದ 20 ರವರೆಗೆ ಅವಕಾಶ ನೀಡಲಾಗಿದೆ.