ಕರ್ನಾಟಕ

karnataka

ETV Bharat / state

ಬೆಂಗಳೂರು ಗಲಭೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆ ಅವಧಿ ವಿಸ್ತರಣೆ: NIAಗೆ ಹೈಕೋರ್ಟ್ ನೋಟಿಸ್

ಬೆಂಗಳೂರು ಗಲಭೆ ಪ್ರಕರಣದ ಆರೋಪಿಗಳು ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಪ್ರತಿವಾದ ಆಲಿಸಿದ ಪೀಠ ರಾಷ್ಟ್ರೀಯ ತನಿಖಾ ಸಂಸ್ಥೆ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಡಿಸೆಂಬರ್ 15ಕ್ಕೆ ಮುಂದೂಡಿತು.

High Court
ಹೈಕೋರ್ಟ್​

By

Published : Dec 8, 2020, 4:32 AM IST

ಬೆಂಗಳೂರು:ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸುವ ಅವಧಿಯನ್ನು 90 ದಿನಗಳಿಂದ 180 ದಿನಗಳಿಗೆ ವಿಸ್ತರಿಸಿರುವ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಪ್ರಕರಣದ ಆರೋಪಿಗಳು ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ವಾದ ಪ್ರತಿವಾದ ಆಲಿಸಿದ ಪೀಠ ರಾಷ್ಟ್ರೀಯ ತನಿಖಾ ಸಂಸ್ಥೆ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಡಿಸೆಂಬರ್ 15ಕ್ಕೆ ಮುಂದೂಡಿತು.

ಕಾವೇರಿ ಕೂಗು ಅಭಿಯಾನ: ಸರ್ಕಾರದ ಸ್ಪಷ್ಟನೆ ಕೇಳಿದ ಹೈಕೋರ್ಟ್

ವಿಚಾರಣೆ ಸಂದರ್ಭದಲ್ಲಿ ಅರ್ಜಿದಾರರ ಪರ ವಾದಿಸಿದ ವಕೀಲ ಅನೀಶ್ ಅಲಿ ಖಾನ್, ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯ ಅವಧಿಯನ್ನು ವಿಸ್ತರಿಸುವಾಗ ಎನ್ಐಎ ವಿಶೇಷ ನ್ಯಾಯಾಲಯ ಆರೋಪಿಗಳಿಗೆ ನೋಟಿಸ್ ನೀಡಿಲ್ಲ ಹಾಗೂ ಅವರ ವಾದ ಆಲಿಸಿಲಿಲ್ಲ. ಕೇವಲ ಎನ್ಐಎ ಮನವಿ ಪರಿಗಣಿಸಿ ಚಾರ್ಜ್ ಶೀಟ್ ಸಲ್ಲಿಕೆ ಅವಧಿಯನ್ನು ವಿಸ್ತರಿಸಿದೆ. ಇದು ನಿಯಮಬಾಹಿರ ಆದೇಶವಾಗಿದ್ದು ರದ್ದುಪಡಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಎನ್ಐಎ ಪರ ವಿಶೇಷ ಅಭಿಯೋಜಕ ಪಿ. ಪ್ರಸನ್ನಕುಮಾರ್ ಆಕ್ಷೇಪಿಸಿ, ಚಾರ್ಜ್ ಶೀಟ್ ಸಲ್ಲಿಕೆಯ 90 ದಿನಗಳ ಅವಧಿ ಪೂರ್ಣಗೊಳ್ಳುವ ಮುನ್ನ ಮತ್ತೆ 90 ದಿನಗಳವರೆಗೆ ವಿಸ್ತರಿಸಿಕೊಳ್ಳಲು ಯುಎಪಿಎ ಕಾಯ್ದೆಯಲ್ಲಿ ಅವಕಾಶವಿದೆ. ಅದರಂತೆ 90 ದಿನಗಳು ಮುಗಿಯುವ ಮೊದಲೇ ಅವಧಿ ವಿಸ್ತರಣೆಗೆ ಮನವಿ ಮಾಡಲಾಗಿತ್ತು. ಅದರಂತೆ ನ್ಯಾಯಾಲಯ ಅವಧಿ ವಿಸ್ತರಿಸಿದೆ. 90 ದಿನಗಳು ಮುಗಿದ ನಂತರ ಅವಧಿ ವಿಸ್ತರಣೆ ಕೇಳಿದರೆ ಮಾತ್ರ ಆರೋಪಿಗಳಿಗೆ ಈ ಕುರಿತು ನೋಟಿಸ್ ನೀಡಬೇಕಾಗುತ್ತದೆ ಎಂದು ವಿವರಿಸಿದರು.

ABOUT THE AUTHOR

...view details