ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ಸ್ಕ್ಯಾನ್ ಪ್ರತಿ ಪಡೆಯುವ ದಿನಾಂಕವನ್ನು ಪಿಯು ಬೋರ್ಡ್ ವಿಸ್ತರಿಸಿದೆ. ಸ್ಕ್ಯಾನ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಈ ಮೊದಲು ಜುಲೈ 10ರವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಕೊನೆಯ ದಿನಾಂಕವನ್ನು ಜುಲೈ 15ಕ್ಕೆ ವಿಸ್ತರಿಸಲಾಗಿದೆ.
ಏಪ್ರಿಲ್-ಮೇ 2022ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಜೂನ್ 18ರಂದು ಪ್ರಕಟಿಸಲಾಗಿತ್ತು. ವಿದ್ಯಾರ್ಥಿಗಳು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಡೌನ್ಲೋಡ್ಗೆ ಅವಕಾಶ ನೀಡಲಾಗಿದೆ. ಅದೇ ರೀತಿ ಈ ಮೊದಲು ಮರುಮೌಲ್ಯಮಾಪನ ಮತ್ತು ಮರುಎಣಿಕೆಗಾಗಿ ಸಲ್ಲಿಸಲು (ಸ್ಕ್ಯಾನ್ ಪ್ರತಿ ತೆಗೆದುಕೊಂಡವರಿಗೆ ಮಾತ್ರ) ಜುಲೈ 13 ಕೊನೆಯ ದಿನಾಂಕವಾಗಿತ್ತು. ಈಗ ಅದನ್ನು ಜುಲೈ 18ರವರೆಗೆ ವಿಸ್ತರಣೆ ಮಾಡಲಾಗಿದೆ.