ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಕಾರಣ ಕೆ.ಆರ್. ಮಾರುಕಟ್ಟೆ ಮತ್ತು ಕಲಾಸಿಪಾಳ್ಯ ಮಾರುಕಟ್ಟೆಗಳ ಸೀಲ್ ಡೌನ್ ಅವಧಿಯನ್ನು ಜು. 31ರವರೆಗೆ ವಿಸ್ತರಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ.
ಕೆ.ಆರ್. ಮಾರುಕಟ್ಟೆ ಸೀಲ್ ಡೌನ್ ಅವಧಿ ವಿಸ್ತರಣೆ: ಬಿಬಿಎಂಪಿ ಆದೇಶ
ಇದೀಗ ಕೊರೊನಾ ನಿಯಂತ್ರಣಕ್ಕೆ ಬಾರದಿರುವುದರಿಂದ ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ಜನಸಂದಣಿ ಹೆಚ್ಚಾಗಿರುತ್ತದೆ. ಹೀಗಾಗಿ ಜುಲೈ ತಿಂಗಳಾಂತ್ಯದವರೆಗೆ ಸೀಲ್ ಡೌನ್ ಮಾಡಲಾಗುವುದು. ಮಾರುಕಟ್ಟೆಯಲ್ಲಿ ಯಾವುದೇ ಮಾರಾಟ ಮಳಿಗೆಗಳು ತೆರೆಯುವುದಿಲ್ಲ ಎಂದು ಬಿಬಿಎಂಪಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆ.ಆರ್. ಮಾರುಕಟ್ಟೆ ಸೀಲ್ ಡೌನ್ ಅವಧಿ ವಿಸ್ತರಣೆ
ಕೊರೊನಾ ಸೋಂಕಿತರು ಹೆಚ್ಚಾದ ಕಾರಣ ಜೂ. 22ರಂದು ಎರಡೂ ಮಾರುಕಟ್ಟೆಗಳನ್ನು ಸೀಲ್ ಡೌನ್ ಮಾಡಲಾಗಿತ್ತು. ಇದೀಗ ಕೊರೊನಾ ನಿಯಂತ್ರಣಕ್ಕೆ ಬಾರದಿರುವುದರಿಂದ ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ಜನಸಂದಣಿ ಹೆಚ್ಚಾಗಿರುತ್ತದೆ. ಹೀಗಾಗಿ ಜುಲೈ ತಿಂಗಳಾಂತ್ಯದವರೆಗೆ ಸೀಲ್ ಡೌನ್ ಮಾಡಲಾಗುವುದು. ಮಾರುಕಟ್ಟೆಯಲ್ಲಿ ಯಾವುದೇ ಮಾರಾಟ ಮಳಿಗೆಗಳು ತೆರೆಯುವುದಿಲ್ಲ ಎಂದು ಬಿಬಿಎಂಪಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.