ಬೆಂಗಳೂರು:ಇಂದು ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲಾ ಕಡೆ ಮಳೆಯಾಗಿದೆ. ಕರಾವಳಿ ಹಾಗೂ ಉತ್ತರ ಒಳನಾಡು ಜಿಲ್ಲೆಗಳ ಕೆಲ ಕಡೆ ಮಾತ್ರ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ ಎಸ್ ಪಾಟೀಲ್ ತಿಳಿಸಿದರು.
ಅ. 1ರಿಂದ 4ರವರೆಗೆ ಕೆಲವು ಕಡೆ ಮಾತ್ರ ಮಳೆ ಸಾಧ್ಯತೆ - Bengalore rain news
ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 1 ರಿಂದ 4 ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ..

ಮಳೆ
ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್
ಮದ್ದೂರು, ಹೊಸಕೋಟೆಯಲ್ಲಿ 6 ಸೆಂ.ಮೀ, ಬೆಂಗಳೂರು, ಗೌರಿಬಿದನೂರಿನಲ್ಲಿ 5 ಸೆಂ.ಮೀ ಮಳೆಯಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ. ಅಕ್ಟೋಬರ್ 1ರಿಂದ 4ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನಲ್ಲಿ ಅಕ್ಟೋಬರ್ 1 ರಿಂದ 4 ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ ಎಂದು ಸಿ ಎಸ್ ಪಾಟೀಲ್ ತಿಳಿಸಿದರು.