ಬೆಂಗಳೂರು :ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಒಳನಾಡಿನಲ್ಲಿ ಬಹುತೇಕ ಎಲ್ಲೆಡೆ ಮಳೆ ಸುರಿದಿದೆ. ಉತ್ತರ ಒಳನಾಡಿನಲ್ಲಿಯೂ ಮಾನ್ಸೂನ್ ಚುರುಕಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.
ಕರಾವಳಿ ಜಿಲ್ಲೆಗಳಲ್ಲಿ ಸೆ.19ರವರೆಗೂ ವ್ಯಾಪಕ ಮಳೆಯಾಗಲಿದೆ. ಸೆ. 16-17ರಂದು ಯಲ್ಲೋ ಅಲರ್ಟ್, ಸೆ.18-19ರಂದು ಮಳೆ ಪ್ರಮಾಣ ಏರಿಕೆಯಾಗಲಿದ್ದು, ಆರೇಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿಯೂ ಸೆ. 19ರವರೆಗೆ ವಿವಿಧೆಡೆ ಮಳೆಯಾಗಲಿದೆ.