ಬೆಂಗಳೂರು: ಕೊರೊನಾ ಸೋಂಕು ಕಡಿಮೆಯಾಗದ ಹಿನ್ನೆಲೆ ರಾಜ್ಯದ ಅರೆ ನ್ಯಾಯಿಕ ಪ್ರಾಧಿಕಾರಗಳು ಹಾಗೂ ಮೇಲ್ಮನವಿ ನ್ಯಾಯಾಧಿಕರಣಗಳಿಗೂ ಕಲಾಪ ನಡೆಸಲು ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಒದಗಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಸರ್ಕಾರಿ ಭೂಮಿ ಒತ್ತುವರಿ ಆರೋಪ ಪ್ರಕರಣವೊಂದರ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕೋವಿಡ್ ಕಾರಣಕ್ಕಾಗಿ ತಹಶೀಲ್ದಾರ್ (ಅರೆ ನ್ಯಾಯಿಕ ಅಧಿಕಾರ ಹೊಂದಿರುವ) ಒತ್ತುವರಿ ಕುರಿತ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ಅಲ್ಲದೇ, ಕೊರೊನಾ ಸೋಂಕು ಉಲ್ಭಣಿಸಿರುವ ಹಿನ್ನೆಲೆ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರರು ನಡೆಸುವ ಅರೆ ನ್ಯಾಯಿಕ ಪ್ರಾಧಿಕಾರಗಳ ವಿಚಾರಣಾ ಕಲಾಪಗಳು, ಮೇಲ್ಮನವಿ ನ್ಯಾಯಾಧೀಕರಣಗಳ ವಿಚಾರಣೆ, ಲೋಕಾಯುಕ್ತ ನ್ಯಾಯಾಲಯದ ಕಲಾಪಗಳು ನಡೆಯುತ್ತಿಲ್ಲ ಎಂದು ವಿವರಿಸಿದರು.
ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ, ಕೊರೊನಾ ಒಂದು ಮತ್ತು ಎರಡನೇ ಅಲೆ ಎದುರಿಸುವ ಅವಧಿಯಲ್ಲೇ ಅರೆ ನ್ಯಾಯಿಕ ಪ್ರಾಧಿಕಾರಗಳಿಗೆ ಮತ್ತು ಮೇಲ್ಮನವಿ ನ್ಯಾಯಾಧಿಕರಣಗಳ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಸೌಲಭ್ಯ ಕಲ್ಪಿಸಬೇಕಿತ್ತು.