ಬೆಂಗಳೂರು: ರಾಜ್ಯಕ್ಕೆ ಅನುಕೂಲವಾಗುವ ಹಲವು ಯೋಜನೆಗಳನ್ನು ಕೇಂದ್ರ ಬಜೆಟ್ನಿಂದ ನಿರೀಕ್ಷಿಸಿದ್ದೇವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಬಜೆಟ್ನಿಂದ ರಾಜ್ಯಕ್ಕೆ ಅನುಕೂಲವಾಗುವ ನಿರೀಕ್ಷೆ ಇದೆ: ಸಿಎಂ - Budget 2020 Latest news
ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡುತ್ತಿದೆ. ನಾವು ಕೂಡ ಮಾರ್ಚ್ ಐದರಂದು ಬಜೆಟ್ ಮಂಡಿಸುತ್ತೇವೆ. ರಾಜ್ಯಕ್ಕೆ ಅನುಕೂಲವಾಗುವ ಹಲವು ಯೋಜನೆಗಳನ್ನು ಕೇಂದ್ರ ಬಜೆಟ್ನಿಂದ ನಿರೀಕ್ಷಿಸಿದ್ದೇವೆ ಎಂದು ಬಿಎಸ್ವೈ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡುತ್ತಿದೆ. ನಾವು ಕೂಡ ಮಾರ್ಚ್ ಐದರಂದು ಬಜೆಟ್ ಮಂಡಿಸುತ್ತೇವೆ. ರಾಜ್ಯಕ್ಕೆ ಅನುಕೂಲವಾಗುವ ಹಲವು ಯೋಜನೆಗಳನ್ನು ಕೇಂದ್ರ ಬಜೆಟ್ನಿಂದ ನಿರೀಕ್ಷಿಸಿದ್ದೇವೆ ಎಂದು ತಿಳಿಸಿದರು.
ಸಚಿವ ಸಂಪುಟದಿಂದ ಕೆಲವರನ್ನು ಕೈ ಬಿಡುವ ಹಾಗೂ ಸಚಿವ ಸಂಪುಟ ವಿಸ್ತರಣೆ ದಿನಾಂಕ ನಿಗದಿ ಬಗ್ಗೆ ಪ್ರತಿಕ್ರಯಿಸಲು ಸಿಎಂ ನಿರಾಕರಿಸಿದರು.ಮಹೇಶ್ ಕುಮಟಳ್ಳಿಗೆ ಸಚಿವ ಸ್ಥಾನ ಕೈ ತಪ್ಪುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಆಮೇಲೆ ಮಾತನಾಡುತ್ತೇನೆ ಎಂದಷ್ಟೇ ಹೇಳಿದರು. ಸಂಪುಟ ವಿಸ್ತರಣೆ ದಿನಾಂಕ ಇನ್ನೆರಡು ದಿನಗಳಲ್ಲಿ ತೀರ್ಮಾನ ಮಾಡ್ತೀವಿ ಎಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.