ಕರ್ನಾಟಕ

karnataka

ETV Bharat / state

ಎಂ. ಬಿ. ಪಾಟೀಲ್ ಹೆಸರಿನ ನಕಲಿ ಲೆಟರ್ ಹೆಡ್​​ ಪ್ರಕರಣ: ಪೊಲೀಸರಿಗೆ ತಲಾ 10 ಸಾವಿರ ದಂಡ - 10,000 fine for two policemen over Fake letterhead case

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಎಂ.ಬಿ.ಪಾಟೀಲ್​​ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್‌ಡಿಇ ಸಂಸ್ಥೆಯ ಲೆಟರ್ ಹೆಡ್‌ನಲ್ಲಿ ಪತ್ರ ಬರೆದಿದ್ದರು ಎನ್ನಲಾಗಿದ್ದು. ಈ ಲೆಟರ್​ನ್ನು ಶಾರದಾ ಎಂಬುವರು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ಎಂಬಿ ಪಾಟೀಲ್ ಹೆಸರಿನ ನಕಲಿ ಲೆಟರ್ ಹೆಡ್​​ ಪ್ರಕರಣ,fake-letterhead-case-named-of-mb-patil
ಎಂಬಿ ಪಾಟೀಲ್ ಹೆಸರಿನ ನಕಲಿ ಲೆಟರ್ ಹೆಡ್​​ ಪ್ರಕರಣ

By

Published : Jan 2, 2020, 10:11 PM IST

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರದಲ್ಲಿ ಮಾಜಿ ಸಚಿವ ಎಂ.ಬಿ.ಪಾಟೀಲರ ಹೆಸರಿನಲ್ಲಿ ನಕಲಿ ಪತ್ರ ಸಷ್ಟಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ಎಂಬುವರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತಂತೆ ಶಾರದಾ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು. ಅರ್ಜಿದಾರರ ಪರ ವಕಾಲತ್ತು ವಹಿಸಿದ ಅರುಣ್ ಶ್ಯಾಮ್ , ಶ್ರೀರಾಂಪುರ ಪೊಲೀಸರು ಇನ್​ಪರ್ಮೇಷನ್​ ಟೆಕ್ನಾಲಜಿ ಕಾಯ್ದೆ ಸೆಕ್ಷನ್ 66(ಎಎನ್)ರೀತ್ಯಾ ಪ್ರಕರಣ‌ ದಾಖಲಿಸಿದ್ದು, ಪ್ರಕರಣ ದಾಖಲಿಸುವಾಗ ಮ್ಯಾಜಿಸ್ಟ್ರೇಟ್ ಅನುಮತಿ ತೆಗೆದುಕೊಂಡಿಲ್ಲ. ಸುಪ್ರೀಂಕೋರ್ಟ್ ಆದೇಶದಂತೆ ಈ ರೀತ್ಯಾ ಪ್ರಕರಣ ದಾಖಲಿಸಲು ಅವಕಾಶವಿಲ್ಲ ಎಂದರು.

ಅರ್ಜಿದಾರರ ವಾದ ಆಲಿಸಿದ ನ್ಯಾಯಾಲಯ, ಶ್ರೀರಾಂಪುರ ಠಾಣೆಯ ಇಬ್ಬರು ಪೊಲೀಸರಿಗೆ ತಲಾ 10 ಸಾವಿರ ರೂ.ದಂಡ ವಿಧಿಸಿ ಸಾಫ್ಟ್‌ವೇರ್ ಎಂಜಿನಿಯರ್ ಶಾರದಾ ಡೈಮಂಡ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದು ಗೊಳಿಸಿದೆ.

ಹಿನ್ನೆಲೆ:
ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಎಂ.ಬಿ.ಪಾಟೀಲ್​ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬಿಎಲ್‌ಡಿಇ ಸಂಸ್ಥೆಯ ಲೆಟರ್ ಹೆಡ್‌ನಲ್ಲಿ ಪತ್ರ ಬರೆದಿದ್ದರು ಎನ್ನಲಾಗಿದ್ದು, ಆ ನಕಲಿ ಪತ್ರವನ್ನು ಶಾರದಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ ಎಂಬ ಆರೋಪ ಇವರ ಮೇಲೆ ಇತ್ತು. ಈ ಸಂಬಂಧ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ABOUT THE AUTHOR

...view details