ಬೆಂಗಳೂರು: ಸದಾಶಿವನಗರದ ನಿವಾಸಿಗಳ ಕ್ರಿಯೇಟ್ ಮಾಡಿರುವ 'ಸದಾಶಿವನಗರ ವೀ ಕೇರ್' ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸುಳ್ಳು ಸುದ್ದಿಯೊಂದು ಹರಿದಾಡುತ್ತಿದ್ದು, ಎಲ್ಲರಲ್ಲೂ ಗೊಂದಲ ಹಾಗೂ ಭಯದ ವಾತಾವರಣ ಸೃಷ್ಟಿಯಾಗುವಂತೆ ಮಾಡಿದೆ.
ಸದಾಶಿವನಗರ ನಿವಾಸಿಗೆ ಕೊರೊನಾ, ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ: ಸುಳ್ಳು ಸುದ್ದಿ ಎಂದ ಪಿಆರ್ಒ - ರಾಜೀವ್ ಗಾಂಧಿ ಆಸ್ಪತ್ರೆ
ಸದಾಶಿವನಗರದ ವೃದ್ಧೆಯೊಬ್ಬರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ನಾವು ಮನೆಯಿಂದ ಬರುತ್ತಿಲ್ಲ ಎಂದು ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಇದು ಸುಳ್ಳು ಎಂದು ವಿಕ್ರಂ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ನಿತಿನ್ ಸ್ಪಷ್ಟಪಡಿಸಿದ್ದಾರೆ.
ಸದಾಶಿವನಗರ ನಿವಾಸಿಗೆ ಕೊರೊನಾ: ಸುಳ್ಳು ಸುದ್ದಿ
ಸದಾಶಿವನಗರದ ವೃದ್ಧೆಯೊಬ್ಬರು ಕೊರೊನಾ ಸೋಂಕಿಗೆ ತುತ್ತಾಗಿದ್ದು, ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ನಾವು ಮನೆಯಿಂದ ಬರುತ್ತಿಲ್ಲ ಎಂದು ಸುಳ್ಳು ಸುದ್ದಿ ಹರಿದಾಡುತ್ತಿದೆ.
ಇದಕ್ಕೆ ಸ್ಪಷ್ಟೀಕರಣ ನೀಡಿದ ವಿಕ್ರಂ ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ನಿತಿನ್, "ಇಲ್ಲಿ ಅಂತಹ ಯಾವುದೇ ರೋಗಿಯೂ ದಾಖಲಾಗಿಲ್ಲ. ಅಷ್ಟೇ ಅಲ್ಲದೆ, ನಮ್ಮ ಆಸ್ಪತ್ರೆಯಲ್ಲಿ ಕೊರೊನಾ ಕುರಿತಾಗಿ ತಪಾಸಣೆ ಮಾಡುತ್ತಿಲ್ಲ. ಬದಲಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ನಡೆಯುತ್ತಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.