ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಪರೀಕ್ಷೆ ಇದ್ದು, ಸಾಮಾಜಿಕ ಜಾಲತಾಣದಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆಗಳನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದು, ಇದು ಫೇಕ್ ಪ್ರಶ್ನೆ ಪತ್ರಿಕೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಫೇಕ್ ಪ್ರಶ್ನೆ ಪತ್ರಿಕೆ... ಆತಂಕ ಬೇಡ ಎಂದ ಸಚಿವರು - ಎಸ್ಎಸ್ಎಲ್ಸಿ ಪರೀಕ್ಷೆ
ಸಾಮಾಜಿಕ ಜಾಲತಾಣದಲ್ಲಿ ಇಂಗ್ಲಿಷ್ ಪ್ರಶ್ನೆ ಪತ್ರಿಕೆಗಳನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದು, ಇದು ಫೇಕ್ ಪ್ರಶ್ನೆ ಪತ್ರಿಕೆ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
suresh kumar
ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಿಡಿಗೇಡಿಗಳ ವಿರುದ್ಧ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಲು ತಾವು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ವಿದ್ಯಾರ್ಥಿಗಳು ಹಾಗೂ ಪೋಷಕರು ಇಂತಹ ಸುದ್ದಿಗಳಿಗೆ ಕಿವಿ ಕೊಡಬೇಡಬಾರದೆಂದು ಮನವಿ ಮಾಡಿರುವ ಸಚಿವ ಸುರೇಶ್ ಕುಮಾರ್, ವಿದ್ಯಾರ್ಥಿಗಳು ಸ್ಥೈರ್ಯದಿಂದ ಪರೀಕ್ಷೆ ಬರೆಯಬೇಕೆಂದು ಹೇಳಿದ್ದಾರೆ.