ಕರ್ನಾಟಕ

karnataka

ETV Bharat / state

ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ - ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ ಬಿವೈವಿಜಯೇಂದ್ರ

ನಕಲಿ ಟ್ವಿಟರ್ ಖಾತೆ ಸೃಷ್ಟಿ ಸಂಬಂಧಿಸಿ ಸೈಬರ್​​ ಕ್ರೈಂ ಪೊಲೀಸರಿಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ದೂರು ನೀಡಿದ್ದಾರೆ.

vijayendra-registered-complaint-in-cyber-crime-police
ವಿಜಯೇಂದ್ರ

By

Published : Sep 5, 2020, 7:27 PM IST

ಬೆಂಗಳೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ನಕಲಿ ಟ್ವಿಟರ್ ಖಾತೆ ಸಂಬಂಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ದುರುದ್ದೇಶದಿಂದ ಟ್ವಿಟ್ಟರ್​ನಲ್ಲಿ ನನ್ನ ಹೆಸರಿನ ನಕಲಿ ಖಾತೆ ಸೃಷ್ಟಿಸಿ, ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ.

ಈ ಸಂಬಂಧ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು ಎಂದು ಕಿಡಿ ಕಾರಿದ್ದಾರೆ.

ABOUT THE AUTHOR

...view details