ಬೆಂಗಳೂರು :ಪುನೀತ್ ರಾಜ್‍ಕುಮಾರ್ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ಹೇಳಿದರು.
ಕಂಠೀರವ ಸ್ಟುಡಿಯೋದಲ್ಲಿಂದು ಪುನೀತ್ ರಾಜ್‍ಕುಮಾರ್ ಅವರ ಸಮಾಧಿಗೆ ಕುಟುಂಬ ವರ್ಗ ಹಾಲು-ತುಪ್ಪ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಾಡಿನ ಜನ ಬೆಲೆ ಕಟ್ಟಲಾಗದ ವಸ್ತು ಕಳೆದುಕೊಂಡಿದ್ದೇವೆ. 11ನೇ ದಿನಕ್ಕೆ ಪುನೀತ್ ಸ್ಮರಣೋತ್ಸವ ಕಾರ್ಯಕ್ರಮ ನಡೆಸಲು ಕುಟುಂಬದವರು ತೀರ್ಮಾನ ಮಾಡಿದ್ದಾರೆ ಎಂದರು.