ಬೆಂಗಳೂರು: ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟ ಮುಂದುವರಿದಿದೆ.
ರೈತರ ಅರೆ ಬೆತ್ತಲೆ ಪ್ರತಿಭಟನೆ ಇಂದು ಕಬ್ಬು ಬೆಳೆಗಾರ ಸಂಘದಿಂದ ಮೌರ್ಯ ಸರ್ಕಲ್ ನಲ್ಲಿ ಅರೆ ಬೆತ್ತಲೆಯಾಗಿ ಪ್ರತಿಭಟನೆ ಮಾಡಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರೈತರು ಅರೆ ಬೆತ್ತಲೆ ಪ್ರತಿಭಟನೆ ಆರಂಭಿಸಿದ್ದಾರೆ.
ರೈತ ದಲಿತ ಕಾರ್ಮಿಕ ಐಕ್ಯ ಹೋರಾಟ ಸಮಿತಿಯಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿಯಲ್ಲಿ ಬಡಗಲಪುರ ನಾಗೇಂದ್ರ ಹಾಗೂ ಇನ್ನಿತರ ರೈತ ಮುಖಂಡರು ಭಾಗವಹಿಸಿದ್ದಾರೆ.
ಇದೇ ವೇಳೆ ರೈತ ಮುಖಂಡ ಬಡಗಲಪುರ ನಾಗೇಂದ್ರ ಮಾತನಾಡಿ, ಮುಖ್ಯಮಂತ್ರಿಗಳು ನಿಜವಾದ ರೈತರನ್ನು ಸಂವಾದಕ್ಕೆ ಕರೆಯೋಲ್ಲ. ಅವರಿಗೆ ಬೇಕಾದ ಕೆಲ ಗುಂಪಿನೊಂದಿಗೆ ಸಂವಾದ ಮಾಡುತ್ತಿದ್ದಾರೆ. ಈ ಮೂಲಕ ಜನರನ್ನು ಸರ್ಕಾರ ಯಾಮಾರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಓದಿ...ಹುಬ್ಬಳ್ಳಿ : ಕುಡುಕ ಗಂಡನ ತಲೆಯನ್ನೇ ಒಡೆದಳು ಪತ್ನಿ !