ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬೆನ್ನಲೇ ರಾಜಭವನಕ್ಕೆ ಬರುವಂತೆ ರಾಜ್ಯಪಾಲರು ರೈತ ಮುಖಂಡರುಗಳಿಗೆ ಆಹ್ವಾನ ನೀಡಿದ್ದಾರೆ.
ರಾಜ್ಯಪಾಲರನ್ನು ಭೇಟಿ ಮಾಡಿದ ರೈತ ಮುಖಂಡರ ನಿಯೋಗ - Delegation of peasant leaders who met the governor
16:37 December 10
ರೈತ ಮುಖಂಡರಿಂದ ರಾಜ್ಯಪಾಲರಿಗೆ ಮನವಿ ಪತ್ರ
ಅನುಮತಿ ನೀಡುತ್ತಿದ್ದಂತೆ ಪ್ರತಿಭಟನೆ ನಡೆಸುತ್ತಿದ್ದ ರೈತ ಮುಖಂಡರಾದ ಕುರುಬೂರು ಶಾಂತಕುಮಾರ್, ಬಡಗಲಪುರ ನಾಗೇಂದ್ರ ಸೇರಿದಂತೆ 10 ಮಂದಿ ರೈತರ ನಿಯೋಗ ರಾಜಭವನಕ್ಕೆ ತೆರಳಿದೆ.
ಓದಿ:ಕಾಡು ಪ್ರಾಣಿಗಳಿಂದ ಬೆಳೆಹಾನಿಯಾದ ಪ್ರಮಾಣದಷ್ಟೇ ಪರಿಹಾರ ನೀಡಿ: ಸರ್ಕಾರಕ್ಕೆ ಸ್ಪೀಕರ್ ಸಲಹೆ
ರಾಜ್ಯಪಾಲರಿಗೆ ಮನವಿ ಪತ್ರ ನೀಡಿ ಅವರೊಂದಿಗೆ ಸಮಲೋಚನೆ ನಡೆಸಲಾಗುವುದು. ಬಳಿಕ ಫ್ರೀಡಂಪಾರ್ಕ್ ಗೆ ಬಂದು ರೈತರೊಂದಿಗೆ ಸಭೆ ನಡೆಸಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ರೈತ ಮುಖಂಡ ಶಾಂತಕುಮಾರ್ ತಿಳಿಸಿದ್ದಾರೆ.