ಕರ್ನಾಟಕ

karnataka

ETV Bharat / state

ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ರೈತರಿಗೆ ದಂಡ: ಹೈಕೋರ್ಟ್​ಗೆ ಸರ್ಕಾರದ ಮಾಹಿತಿ - Tractor Rally

ಜನವರಿ 26ರಂದು ನಡೆದ ರ‍್ಯಾಲಿಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆ ಹಾಗೂ ದಂಡ ವಿಧಿಸಿದ ಕುರಿತು ಮಾಹಿತಿ ಕೇಳಿತು. ಇದಕ್ಕೆ ಸರ್ಕಾರದ ಪರ ವಕೀಲ ವಿಕ್ರಮ್ ಹುಯಿಲ್ಗೋಳ ಅವರು ಉತ್ತರಿಸಿ, ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ 98 ಜನರಿಗೆ ತಲಾ 250 ರೂ. ಹಾಗೂ ಆಯೋಜಕರಿಬ್ಬರಿಗೆ ತಲಾ 10 ಸಾವಿರ ರೂ. ದಂಡ ವಿಧಿಸಲಾಗಿದೆ. 27 ಮಂದಿ ವಿರುದ್ಧ ಎನ್​ಡಿಎಂ ಕಾಯ್ದೆ ಅಡಿ ದೂರು ದಾಖಲಿಸಿದ್ದೇವೆ ಎಂದು ಸರ್ಕಾರ ಕೋರ್ಟ್​ಗೆ ಮಾಹಿತಿ ನೀಡಿತು.

ಹೈಕೋರ್ಟ್​ಗೆ ಸರ್ಕಾರದ ಮಾಹಿತಿ
ಹೈಕೋರ್ಟ್​ಗೆ ಸರ್ಕಾರದ ಮಾಹಿತಿ

By

Published : Feb 1, 2021, 8:24 PM IST

ಬೆಂಗಳೂರು:ರೈತರ ಜನ ಗಣರಾಜ್ಯೋತ್ಸವ ಪರೇಡ್​ಗೆ ಬೆಂಬಲ ಸೂಚಿಸಿ ನಗರದಲ್ಲಿ ನಡೆದ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ರೈತರು ಮತ್ತು ಆಯೋಜಕರಿಗೆ ದಂಡ ವಿಧಿಸಿ, ದೂರು ದಾಖಲಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಈ ಕುರಿತು ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಇಂದು ವಿಚಾರಣೆ ನಡೆಸಿತು. ಈ ವೇಳೆ ಸರ್ಕಾರಿ ವಕೀಲರನ್ನು ಪ್ರಶ್ನಿಸಿದ ಪೀಠ, ಜನವರಿ 26ರಂದು ನಡೆದ ರ‍್ಯಾಲಿಯಲ್ಲಿ ಕೋವಿಡ್ ಮಾರ್ಗಸೂಚಿಗಳ ಪಾಲನೆ ಹಾಗೂ ದಂಡ ವಿಧಿಸಿದ ಕುರಿತು ಮಾಹಿತಿ ಕೇಳಿತು.

ಇದಕ್ಕೆ ಸರ್ಕಾರದ ಪರ ವಕೀಲ ವಿಕ್ರಮ್ ಹುಯಿಲ್ಗೋಳ ಅವರು ಉತ್ತರಿಸಿ, ಟ್ರಾಕ್ಟರ್ ರ‍್ಯಾಲಿ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ 98 ಜನರಿಗೆ ತಲಾ 250 ರೂ. ಹಾಗೂ ಆಯೋಜಕರಿಬ್ಬರಿಗೆ ತಲಾ 10 ಸಾವಿರ ರೂ. ದಂಡ ವಿಧಿಸಲಾಗಿದೆ. 27 ಮಂದಿ ವಿರುದ್ಧ ಎನ್​ಡಿಎಂ ಕಾಯ್ದೆ ಅಡಿ ದೂರು ದಾಖಲಿಸಿದ್ದೇವೆ ಎಂದು ವಿವರಿಸಿದರು.

ಓದಿ: ಮೈಸೂರು ರೇಸ್ ಕ್ಲಬ್​ಗೆ ಅವೈಜ್ಞಾನಿಕವಾಗಿ ಭೂಮಿ ಗುತ್ತಿಗೆ ಆರೋಪ: ಸರ್ಕಾರಕ್ಕೆ ಗಡುವು ನೀಡಿದ ಹೈಕೋರ್ಟ್

ಈ ಕುರಿತ ಸಂಪೂರ್ಣ ವಿವರಗಳನ್ನು ಲಿಖಿತವಾಗಿ ಸಲ್ಲಿಸಿ ಎಂದು ಸರ್ಕಾರದ ಪರ ವಕೀಲರಿಗೆ ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಿತು. ಇದೇ ವೇಳೆ, ಅರ್ಜಿಗೆ ಆಕ್ಷೇಪಣೆ ಸಲ್ಲಿಸದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗೆ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲು ಸೂಚಿಸಿತು. ಒಂದು ವೇಳೆ ಹಾಜರಾಗದಿದ್ದಲ್ಲಿ ಪಕ್ಷಗಳ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿಯೂ ಎಚ್ಚರಿಕೆ ನೀಡಿತು.

ಹಿಂದಿನ ವಿಚಾರಣೆ ವೇಳೆ, ರಾಜಕೀಯ ಪಕ್ಷಗಳು ತಮ್ಮ ಮುಖಂಡರು ಹಾಗೂ ಕಾರ್ಯಕರ್ತರು ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದ ಪೀಠ, ಈ ಸಂಬಂಧ ಲಿಖಿತವಾಗಿ ಭರವಸೆ ನೀಡಲು ಸೂಚಿಸಿತ್ತು. ಆದರೆ, ಬಿಜೆಪಿ ಹಾಗೂ ಜೆಡಿಎಸ್ ಈವರೆಗೆ ಅಕ್ಷೇಪಣೆಯನ್ನೂ ಸಲ್ಲಿಸಿಲ್ಲ, ವಿಚಾರಣೆಗೂ ಹಾಜರಾಗಿಲ್ಲ.

ABOUT THE AUTHOR

...view details