ಬೆಂಗಳೂರು: ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದಿಂದ 71ನೇ ಗಣರಾಜ್ಯೋತ್ಸವ ಮತ್ತು ಅಂಗಾಂಗ ದಾನಿಗಳ ದಿನಾಚರಣೆಯ ಪ್ರಯುಕ್ತ ಕನ್ನಡ ಭವನದ ನಯನ ಸಭಾಂಗಣದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದಿಂದ ವಿವಿಧ ಸಾಧಕರಿಗೆ ಸನ್ಮಾನ - Felicitation to Different Achievers
ನಿತ್ಯೋತ್ಸವ ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಘದಿಂದ 71ನೇ ಗಣರಾಜ್ಯೋತ್ಸವ ಮತ್ತು ಅಂಗಾಂಗ ದಾನಿಗಳ ದಿನಾಚರಣೆಯ ಪ್ರಯುಕ್ತ ಕನ್ನಡ ಭವನದ ನಯನ ಸಭಾಂಗಣದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ, ಸಂಗೀತ, ಶಿಕ್ಷಣ, ಭರತನಾಟ್ಯ, ಕೃಷಿ, ಸಮಾಜ ಸೇವೆ, ವಿಜ್ಞಾನ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ನೀಡಲಾಯಿತು. ಗುವಾಹಟಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶ್ರೀಧರ್ ರಾವ್, ಕೊಳದ ಮಠದ ಸ್ವಾಮೀಜಿಗಳು ಸಾಧಕರನ್ನು ಗೌರವಿಸಿದರು.
ನಿವೃತ್ತ ನ್ಯಾಯಮೂರ್ತಿ ಶ್ರೀಧರ್ ರಾವ್ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಎಲೆಮರಿ ಕಾಯಿಯಂತಿರುವ ಸಾಧಕರನ್ನು ಹುಡುಕಿ ಪ್ರಶಸ್ತಿ ನೀಡುವ ಕೆಲಸವಾಗಬೇಕು. ಮುಖ್ಯವಾಗಿ ಕೃಷಿ ಕ್ಷೇತ್ರದಲ್ಲಿ ಇನ್ನೂ ಬಹಳಷ್ಟು ಮಂದಿ ಸಾಧನೆ ಮಾಡಿದವರು ಇದ್ದಾರೆ. ಅವರನ್ನು ಹುಡುಕಿ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಕಿವಿ ಮಾತು ಹೇಳಿದರು.
TAGGED:
ವಿವಿಧ ಸಾಧಕರಿಗೆ ಸನ್ಮಾನ