ಬೆಂಗಳೂರು: ಕೊರೊನಾ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ, ಬೆಂಗಳೂರಿನ 31 ಕಡೆಗಳಲ್ಲಿ ಫೀವರ್ ಕ್ಲಿನಿಕ್ ನಿರ್ಮಾಣ ಮಾಡಲಾಗಿದೆ. ಇಂದಿನಿಂದ ಶುರುವಾಗಿರುವ ಕ್ಲಿನಿಕ್ಗೆ ಜನರು ಆಗಮಿಸಿ, ಕೊರೊನಾ ಬಗೆಗಿನ ಅನುಮಾನಗಳನ್ನು ಪರಿಹರಿಸಿಕೊಳ್ಳುತ್ತಿದ್ದಾರೆ. ಬೆಳಗ್ಗೆ 9ರಿಂದ ಸಂಜೆ 4:30ರವೆಗೂ ಕ್ಲಿನಿಕ್ಗಳು ಕಾರ್ಯ ನಿರ್ವಹಿಸುತ್ತವೆ.
ಫೀವರ್ ಕ್ಲಿನಿಕ್ ಇಂದಿನಿಂದ ಶುರು : ಕೊರೊನಾ ಬಗೆಗಿನ ಅನುಮಾನ ಪರಿಹರಿಸಿಕೊಳ್ಳುತ್ತಿರುವ ಜನರು.. - corona effect in Bangalore
ಬಿಬಿಎಂಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಆಸ್ಪತ್ರೆಗಳು ಸೇರಿದಂತೆ ಬೆಂಗಳೂರಿನ 31 ಕಡೆಗಳಲ್ಲಿ ಫೀವರ್ ಕ್ಲಿನಿಕ್ ನಿರ್ಮಾಣ ಮಾಡಲಾಗಿದೆ..
![ಫೀವರ್ ಕ್ಲಿನಿಕ್ ಇಂದಿನಿಂದ ಶುರು : ಕೊರೊನಾ ಬಗೆಗಿನ ಅನುಮಾನ ಪರಿಹರಿಸಿಕೊಳ್ಳುತ್ತಿರುವ ಜನರು.. Fever Clinic from started today](https://etvbharatimages.akamaized.net/etvbharat/prod-images/768-512-6582817-597-6582817-1585464903267.jpg)
ಫೀವರ್ ಕ್ಲಿನಿಕ್ ಇಂದಿನಿಂದ ಶುರು
ಈ ಕ್ಲಿನಿಕ್ಗಳಲ್ಲಿ ಜ್ವರ, ಕಫ ಹಾಗೂ ಸ್ಕ್ರೀನಿಂಗ್ ಟೆಸ್ಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೊಂದು ಕ್ಲಿನಿಕ್‌ನಲ್ಲೂ ವೈದ್ಯಾಧಿಕಾರಿ, ಶುಶ್ರೂಶಕಿ, ಹಿರಿಯ ಹಾಗೂ ಕಿರಿಯ ಆರೋಗ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಫೀವರ್ ಕ್ಲಿನಿಕ್ ಇಂದಿನಿಂದ ಶುರು
ಬಿಬಿಎಂಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಸಾರ್ವಜನಿಕ ಆಸ್ಪತ್ರೆಗಳಲ್ಲಿ ಈ ಕ್ಲಿನಿಕ್ಗಳನ್ನು ತೆರೆಯಲಾಗಿದೆ. ಸರ್ಕಾರಿ ರಜೆ ದಿನಗಳಲ್ಲೂ ಫೀವರ್ ಕ್ಲಿನಿಕ್ ಕಾರ್ಯನಿರ್ವಹಿಸಲಿದೆ. ಇವುಗಳು ದಿನದ ವರದಿಯನ್ನು ಸಂಗ್ರಹಿಸಿ ಪಾಲಿಕೆಗೆ ಸಲ್ಲಿಸುವಂತೆ ಆದೇಶಿಸಲಾಗಿದೆ.