ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕಾಕರಣ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾಡಳಿತಗಳ ಜತೆ ವಿಡಿಯೋ ಸಂವಾದ ನಡೆಸಿದರು. ಇತ್ತ ಆರೋಗ್ಯ ಸೌಧದಿಂದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಇಲಾಖೆ ಹಿರಿಯ ಅಧಿಕಾರಿಗಳ ಜತೆ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.
ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವರು, ಸಿಎಂ ಜೊತೆಗೆ ಎರಡು ಗಂಟೆಗಳ ಕಾಲ ವಿಡಿಯೋ ಸಂವಾದ ನಡೆಸಿದೆವು. ರಾಜ್ಯದ 18 ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದೇವೆ. ಕೆಲವು ಸೂಚನೆ ಸಲಹೆ ಕೊಟ್ಟಿದ್ದೇವೆ. ವಿಶೇಷವಾಗಿ ಕೋವಿಡ್ ಟೆಸ್ಟಿಂಗ್ ICMR ಗೈಡ್‌ಲೈನ್ಸ್‌ನಂತೆ ಮಾಡಬೇಕು. 60 ವರ್ಷ ಮೇಲ್ಪಟ್ಟ ILI & SARI ಪ್ರಕರಣಗಳ ಮೇಲೆ ಹೆಚ್ಚಿನ ಕಾಳಜಿವಹಿಸಬೇಕು. ಹಾಗೆಯೇ ಪಾಸಿಟಿವ್ ಬರುವ ಬಗ್ಗೆ ಹೆಚ್ಚಿನ ಚಿಂತೆ ಬೇಡ ಅಂತ ಹೇಳಲಾಗಿದೆ ಎಂದರು.
ಇನ್ನು, ಪ್ರತಿ ಜಿಲ್ಲಾ ಕೇಂದ್ರದಲ್ಲಿ ವಾರ್ ರೂಂ ಏರ್ಪಾಡಬೇಕು, ಗ್ರಾಮಗಳಲ್ಲೂ ವಾರ್ ರೂಮ್ ಸ್ಥಾಪಿಸಬೇಕು. ಹಾಗೇ ಫೀವರ್ ಕ್ಲಿನಿಕ್ ಹೆಚ್ಚಿಸಲು ಸೂಚಿಸಲಾಗಿದ್ದು ಇದರಿಂದ ಆಸ್ಪತ್ರೆಗೆ ಹೋಗುವವರ ಸಂಖ್ಯೆ ಕಡಿಮೆ ಆಗುತ್ತೆ. ಹೋಮ್ ಐಸೋಲೋಷನ್ ಇದ್ದವರಿಗೆ ಕಿಟ್ಸ್ ವ್ಯವಸ್ಥೆ ಮಾಡುವುದು ಸೇರಿದಂತೆ, ಪಾಸಿಟಿವ್ ಬಂದಿರುವ ವ್ಯಕ್ತಿ ಮನೆಗೆ ತಲುಪಿಸಬೇಕು. ಇದನ್ನು ನಗರ ಹಾಗೂ ಗ್ರಾಮದಲ್ಲಿ ಜಾರಿ ಮಾಡಲಾಗಿದೆ ಎಂದರು.
ವೈದ್ಯರ ನಡಿಗೆ ಹಳ್ಳಿ ಕಡೆಗೆ:
ವೈದ್ಯರು ಹಾಗೂ ದಾದಿಯರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮ ಪುನರಾರಂಭಕ್ಕೆ ಸಿಎಂ ಸಲಹೆ ನೀಡಿದ್ದು, ಈಗಾಗಲೇ ಎಲ್ಲರಿಗೂ ಸೂಚನೆ ನೀಡಲಾಗಿದೆ ಎಂದರು. ಈಗಾಗಲೇ ಆಕ್ಸಿಜನ್ ಪ್ಲಾಂಟ್ 264 ರಲ್ಲಿ 222 ಸೇವೆಗೆ ಚಾಲನೆ ನೀಡಲಾಗಿದೆ. ಮೂರನೇ ಡೋಸ್ ಗೆ ಹೆಚ್ಚಿನ ಒತ್ತು ನೀಡುತ್ತಿದ್ದೇವೆ. ಶೇ 39 ಅಷ್ಟು 3ನೇ ಡೋಸ್ ಆಗಿದ್ದು, ಇದು ನಮಗೆ ಅಸಮಾಧಾನ ಇದೆ. ಇದು ತೃಪ್ತಿದಾಯಕವಾಗಿಲ್ಲ. ಹೀಗಾಗಿ ಮುಂದಿನ ವಾರ ಇದರ ಅಭಿಯಾನ ಮಾಡುತ್ತೇವೆ ಎಂದು ತಿಳಿಸಿದರು.