ಬೆಂಗಳೂರು:ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಅನುಮತಿ ನೀಡಿದ ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ. ಸದಾನಂದ ಗೌಡರ ಕಾರ್ಯ ಸಾಧನೆಯನ್ನು ಎಫ್‍ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ. ಸುಂದರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಡಿವಿಎಸ್ ಮಂಗಳೂರಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಅನುಮತಿ ನೀಡಿದ್ದು ಪ್ರಶಂಸನೀಯ: ಪೆರಿಕಲ್ ಎಂ ಸುಂದರ್ - ಮಂಗಳೂರಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ
ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವರಾದ ಡಿ.ವಿ.ಸದಾನಂದ ಗೌಡರು ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪಿಸಲು ಅನುಮತಿ ನೀಡಿದ್ದಾರೆ. ಈ ಕಾರ್ಯಕ್ಕೆ ಎಫ್‍ಕೆಸಿಸಿಐ ಅಧ್ಯಕ್ಷ ಪೆರಿಕಲ್ ಎಂ. ಸುಂದರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಅಡಿಯಲ್ಲಿರುವ ರಾಸಾನಿಯಕ ಮತ್ತು ಪೆಟ್ರೋಕೆಮಿಕಲ್ ಇಲಾಖೆಯು ಕರ್ನಾಟಕ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಪುರಸ್ಕರಿಸಿ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಅನ್ನು ಸ್ಥಾಪಿಸಲು ಅನುಮೋದನೆ ನೀಡಿದೆ. ಇದಕ್ಕೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಪೆರಿಕಲ್ ಎಂ. ಸುಂದರ್ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಪ್ಲಾಸ್ಟಿಕ್ ಕೈಗಾರಿಕೆಗಳು ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಪ್ರಾಬ್ಯಲದೊಂದಿಗೆ ತಮ್ಮ ಜಾಲವನ್ನು ಹರಡಿಕೊಂಡಿದ್ದು, ಪ್ಲಾಸ್ಟಿಕ್ ಪಾರ್ಕ್‍ನಿಂದಾಗಿ ಎಂಎಸ್‍ಎಂಇಗಳ ಬೆಳೆವಣಿಗೆಗೆ ಉತ್ತೇಜನ ಹಾಗೂ ಕರಾವಳಿ ಪ್ರದೇಶ ಜನರ ಆರ್ಥಿಕ ಪರಿಸ್ಥಿತಿಯನ್ನು ಪುನರುಜ್ಜೀವನಗೊಳಿಸಲು ಸಹಕಾರಿಯಾಗುತ್ತದೆ. ಈ ಯೋಜನೆ ಕರಾವಳಿ ಪ್ರದೇಶದಲ್ಲಿ ಉದ್ಯೋಗ ಸೃಷ್ಟ ಮಾಡುವುದಲ್ಲದೆ ಆ ಪ್ರದೇಶಗಳಲ್ಲಿ ಬಂಡವಾಳ ಹೂಡಿಕೆ ಹಾಗೂ ಮೂಲಭೂತ ಸೌಕರ್ಯಗಳ ಬೆಳವಣಿಗೆಗೆ ಸಹಾಯವಾಗಲಿದೆ ಎಂದು ಹೇಳಿದ್ದಾರೆ.