ಬೆಂಗಳೂರು:ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಸಕಲ ಸಿದ್ಧತೆ ನಡೆಸುತ್ತಿವೆ. ಪ್ರಮುಖ ಪಕ್ಷಗಳು ಸಭೆ, ಸಮಾವೇಶ, ಯಾತ್ರೆಗಳ ಮೂಲಕ ಮತದಾರರ ಗಮನ ಸೆಳೆಯುವತ್ತ ದೃಷ್ಟಿ ನೆಟ್ಟಿವೆ. ಈ ನಡುವೆ ಶನಿವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜಾಜಿನಗರ ವಿಧಾನಸಭೆ ಟಿಕೆಟ್ ಸಂಬಂಧ ನಡೆದ ಸಭೆಯಲ್ಲಿ ಎರಡು ಬಣಗಳ ಮಧ್ಯೆ ಘರ್ಷಣೆ ನಡೆದಿದೆ.
ಕೆಪಿಸಿಸಿ ಕಚೇರಿಯಲ್ಲಿ ಗದ್ದಲ, ಗಲಾಟೆ ಏರ್ಪಟ್ಟಿದ್ದು, ಕೈ ಕಾರ್ಯಕರ್ತರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ರಾಜಾಜಿನಗರ ಟಿಕೆಟ್ ಗೊಂದಲದ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಭೆ ನಡೆಯುತ್ತಿತ್ತು. ಈ ವೇಳೆ ಮೂಲ ಹಾಗೂ ವಲಸಿಗರು ಎಂಬ ವಿಚಾರಕ್ಕೆ ವಾಗ್ವಾದ ನಡೆದಿದೆ.
ಇದನ್ನೂ ಓದಿ:ಬಿಜೆಪಿಯನ್ನು ನನ್ನ ಗುರು ಎಂದು ಪರಿಗಣಿಸಿರುವೆ: ರಾಹುಲ್ ಗಾಂಧಿ