ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ): ಬೈಕ್ ರ್ಯಾಲಿ ವೇಳೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಜೆಡಿಎಸ್ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಯಲಹಂಕದ ಅಟ್ಟೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಈ ಗಲಾಟೆಯಲ್ಲಿ ಜೆಡಿಎಸ್ ಕಾರ್ಯಕರ್ತನಿಗೆ ಗಂಭೀರ ಗಾಯಾಗಳಾಗಿದ್ದು, ಸದ್ಯ ಗಾಯಾಳುವನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಇಂದು ಬೈಕ್ ರ್‍ಯಾಲಿ ಏರ್ಪಡಿಸಿದ್ದರು. ಈ ವೇಳೆ ಎರಡು ಪಕ್ಷಗಳ ಬೈಕ್ ರ್‍ಯಾಲಿ ಮುಖಾಮುಖಿಯಾದಾಗ ಪರಸ್ಪರ ಘೋಷಣೆಗಳನ್ನ ಕೂಗಿದ್ದಾರೆ. ನಂತರ ಎರಡು ಪಕ್ಷದ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಿಸಿಲಾಗಿದೆ.