ಬೆಂಗಳೂರು :ಉತ್ತರ ಪ್ರದೇಶ, ತಮಿಳುನಾಡು, ಕೇರಳದಲ್ಲಿ ಕುಂಬದ್ರೋಣ ಮಳೆಯಿಂದ ಜಲ ಪ್ರಳಯವನ್ನ ನೋಡಿದ್ದೆವು. ಇದೀಗ ಕಳೆದ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬೆಂಗಳೂರಿನ ಜನತೆ ಕೂಡ ತತ್ತರಿಸಿ ಹೋಗಿದ್ದಾರೆ. ಬೆಂಗಳೂರು ಕೂಡ ಜಲ ಪ್ರಳಯದಿಂದ ರೋಸಿ ಹೋಗಿ ರಾಜ್ಯ ಸರ್ಕಾರದ ಬಗ್ಗೆ ಅವಸ್ಥೆಯ ಸಾರ್ವಜನಿಕರು ಸರ್ಕಾರಕ್ಕೆ ಇಡೀ ಶಾಪ ಹಾಕುತ್ತಿದ್ದಾರೆ. ಉದ್ಯಮಿಗಳು ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಗಳೂರು ಮಳೆಯ ಕುರಿತಾಗಿ ಸಾಕಷ್ಟು ಚರ್ಚೆ ನಡೆಸಲಾಗುತ್ತದೆ. ಸದ್ಯ ಈ ಬಗ್ಗೆ ನಟಿ, ಮಾಜಿ ಸಂಸದೆ ರಮ್ಯಾ, ಬೆಂಗಳೂರಿನ ಶಾಸಕರ ರಿಯಲ್ ಎಸ್ಟೇಟ್ ದಂಧೆಯ ಕುರಿತಂತೆ ಧ್ವನಿ ಎತ್ತಿದ್ದಾರೆ.
ಕರ್ನಾಟಕದ ಎಷ್ಟು ಶಾಸಕರು ಮತ್ತು ಸಂಸದರು ರಿಯಲ್ ಎಸ್ಟೇಟ್ ವ್ಯವಹಾರ ಹೊಂದಿದ್ದಾರೆ ಎಂದು ನಿಮಗೆ ತಿಳಿದಿದೆಯೇ? ಬೆಂಗಳೂರಿನ 28 ಶಾಸಕರುಗಳಲ್ಲಿ 26 ಮಂದಿ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಮಾಡುತ್ತಿದ್ದಾರೆ ಅಂತಾ ರಮ್ಯಾ ಶಾಕ್ ಆಗುವ ವಿಚಾರವನ್ನ ತಮ್ಮ ಟ್ವಿಟ್ಟರ್ ನಲ್ಲಿ ಬಹಿರಂಗ ಪಡಿಸಿದ್ದಾರೆ. ಚುನಾವಣೆಗೆ ಸ್ಪರ್ಧೆ ಮಾಡಲು ಯಾಕೆ ಕೇವಲ ಹಣ ಇರುವವರಿಗೆ ಹೆಚ್ಚಾಗಿ ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ನೀಡಲಾಗುತ್ತಿದೆ? ಯೋಚನೆ ಮಾಡಬೇಕು. ವಿಧಾನಸಭೆ ಚುನಾವಣೆಯಲ್ಲಿ ಖರ್ಚು ಮಾಡಲು ಚುನಾವಣಾ ಆಯೋಗ ನಿಗದಿಪಡಿಸಿದ ಮೊತ್ತ 40 ಲಕ್ಷ ರೂ. ಆದರೆ ಚುನಾವಣೆಗಳ್ಯಾಕೆ ಕೋಟಿಗಳಲ್ಲಿ ನಡೆಯುತ್ತಿದೆ ಎಂದು ರಮ್ಯಾ ಪ್ರಶ್ನಿಸಿದ್ದಾರೆ.