ಬೆಂಗಳೂರು:ಟೌನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ, ಫ್ರೀ ದಲಿತ ಎಂದು ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದ್ದ ಯುವತಿ ಅರುದ್ರಾ ವಿರುದ್ಧ ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫ್ರೀ ಕಾಶ್ಮೀರ್ ಎಂದು ಪೋಸ್ಟರ್ ಪ್ರದರ್ಶಿಸಿದ್ದ ಯುವತಿ ವಿರುದ್ಧ ಎಫ್ಐಆರ್ - fir on arudra
ಟೌನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ್, ಫ್ರೀ ದಲಿತ ಎಂದು ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದ್ದ ಯುವತಿ ವಿರುದ್ಧ ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟೌನ್ ಹಾಲ್ ಮುಂದೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ಇದಕ್ಕೂ ಮುನ್ನ ದಲಿತ ಮುಕ್ತಿ, ಫ್ರೀ ಕಾಶ್ಮೀರ್ ಟ್ಯಾಗ್ ಇರುವ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡಸಿದ ಅರುದ್ರಾ ಎಂಬ ಯುವತಿಯನ್ನು ವಶಕ್ಕೆ ಪಡೆದಿದ್ದರು. ಸದ್ಯ ಆಕೆಯ ವಿರುದ್ಧ ಐಪಿಎಸಿ ಸೆಕ್ಷನ್ 153 A, 153B ಶಾಂತಿ ಭಂಗ ಹಾಗೂ ಕೋಮುಪ್ರಚೋದನೆ ಪ್ರಕರಣ ದಾಖಲಿಸಿಕೊಂಡು ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ.
ಮಾಹಿತಿ ಪ್ರಕಾರ, ಯುವತಿಯನ್ನು ವೈದ್ಯಕೀಯ ತಪಾಸಣೆ ನಡೆಸಿದ ನಂತರ, ಇಂದು ಸರ್ಕಾರಿ ರಜೆ ಇರುವುದರಿಂದ ಕೋರಮಂಗಲದ ಎನ್ಜಿವಿ ಬಡಾವಣೆಯಲ್ಲಿರುವ ನ್ಯಾಯಾಧೀಶರ ಮನೆಗೆ ಪೊಲೀಸರು ಕರೆದೊಯ್ಯಲಿದ್ದಾರೆ ಎಂದು ತಿಳಿದುಬಂದಿದೆ.