ಕರ್ನಾಟಕ

karnataka

By

Published : Apr 26, 2021, 10:37 AM IST

ETV Bharat / state

'ಸೋಂಕಿತರಿಗೆ ಬೆಡ್ ಕೊಡಲಿಲ್ಲ': ಬೆಂಗಳೂರಿನ ಖಾಸಗಿ ಆಸ್ಪತ್ರೆ ಸಿಇಒ ಸೇರಿ 6 ಮಂದಿ ವಿರುದ್ಧ FIR

ಬಿಬಿಎಂಪಿ ವೈದ್ಯಾಧಿಕಾರಿ ನಾಗೇಂದ್ರ ಕುಮಾರ್ ನೀಡಿದ ದೂರಿನ‌ ಮೇರೆಗೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಸಿಇಒ ಸೇರಿ 6 ಜನರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

FIR against Bangalore Private hospital
ಅಪೋಲೊ ಆಸ್ಪತ್ರೆ ವಿರುದ್ಧ ಎಫ್ಐಆರ್

ಬೆಂಗಳೂರು:ಕೊರೊನಾ ಸಂಕಷ್ಟ ಕಾಲದಲ್ಲಿ ಸೋಂಕಿತರಿಗೆ ನೀಡಲು ಹಾಸಿಗೆ ಇಲ್ಲ ಎನ್ನುತ್ತಿದ್ದ ಖಾಸಗಿ ಆಸ್ಪತ್ರೆಯೊಂದರ ಕಳ್ಳಾಟ ಬಯಲಾಗಿದೆ. ಈ ಸಂಬಂಧ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಸೇರಿ 6 ಜನರ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೊಮ್ಮನಹಳ್ಳಿ ವಲಯದ ಬಿಬಿಎಂಪಿ ವೈದ್ಯಾಧಿಕಾರಿ ನಾಗೇಂದ್ರ ಕುಮಾರ್ ನೀಡಿದ ದೂರಿನ‌ ಮೇರೆಗೆ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಯ ಸಿಇಒ ಡಾ.ಡೇವಿಡ್ ಸೋನಾ, ಆಪರೇಷನ್ ಹೆಡ್ ಕಲ್ಪನಾ, ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಶಾಂತಾ ಸೇರಿದಂತೆ 6 ಮಂದಿ ವಿರುದ್ಧ ರಾಷ್ಟ್ರೀಯ ವಿಕೋಪ ನಿರ್ವಹಣಾ ಕಾಯ್ದೆ (ಎನ್​ಡಿಎಂಎ)ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಸೋಂಕಿತರು ಹೆಚ್ಚಾದ ಹಿನ್ನೆಲೆಯಲ್ಲಿ ರೋಗಿಗಳಿಗೆ ಬೆಡ್​ಗಳ ಕೊರತೆಯಿದೆ. ಹಾಗಾಗಿ ಶೇ.50 ರಷ್ಟು ಬೆಡ್​​ಗಳನ್ನು ಸೋಂಕಿತರಿಗೆ ಮೀಸಲಿರಿಸಬೇಕೆಂದು ರಾಜ್ಯ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ತಾಕೀತು ಮಾಡಿತ್ತು. ಇದರಂತೆ ಆಸ್ಪತ್ರೆಯಲ್ಲಿರುವ ಬೆಡ್​ಗಳಲ್ಲಿ ಅರ್ಧದಷ್ಟು ಸೋಂಕಿತರಿಗೆ ನೀಡದೆ ವಂಚಿಸಿದೆ ಎನ್ನಲಾಗ್ತಿದೆ.

ಕಳೆದ ಏ.14ರಂದು ಬಿಬಿಎಂಪಿ ಕೋಟಾ ಅಡಿಯಲ್ಲಿ ಕೊರೊನಾ ಸೋಂಕಿತರೊಬ್ಬರು ಆಸ್ಪತ್ರೆ ದಾಖಖಲಾಗಿ ಏ.20ರಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು. ಆದರೆ ಏ. 24ವರೆಗೂ ಅಡ್ಮಿಟ್ ಆಗಿದ್ದಾರೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ. ಅದೇ ರೀತಿ ಮತ್ತೋರ್ವ ಕೊರೊನಾ ಸೋಂಕಿತ ಏ.16 ಏಪ್ರಿಲ್ ರಂದು ದಾಖಲಾಗಿದ್ದರು. ಏ.20ರಂದು ಸೋಂಕಿತ ವ್ಯಕ್ತಿ ಮೃತಪಟ್ಟಿದ್ದರು. ಅಲ್ಲದೇ 2.49 ಲಕ್ಷ ರೂ. ಬಿಲ್ ಅಕ್ರಮವಾಗಿ ಕಟ್ಟಿಸಿಕೊಂಡಿದ್ದಾರೆ. ಬಿಬಿಎಂಪಿಗೆ 25 ರಂದು ದಾಖಲಾಗಿರುವುದಾಗಿ ತೋರಿಸಿ ವಂಚಿಸಿದ್ದಾರೆ. ಇದೇ ರೀತಿ ಮೂವರಿಗೆ ಮೋಸ ಮಾಡಿ ಬೇರೆ ಕೊರೊನಾ ಸೋಂಕಿತ ವ್ಯಕ್ತಿಗಳಿಗೆ ಬೆಡ್ ನೀಡದೆ ವಂಚಿಸಿದ್ದಾರೆ ಎಂದು ನಾಗೇಂದ್ರ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ:ಇಂದು ಸಚಿವ ಸಂಪುಟ ಸಭೆ: ಲಾಕ್​ಡೌನ್ ಗೊಂದಲಕ್ಕೆ ತೆರೆ, ಉಚಿತ ಲಸಿಕೆ ಬಗ್ಗೆ ನಿರ್ಧಾರ

ABOUT THE AUTHOR

...view details