ಬೆಂಗಳೂರು: ರಜೆ ಪಡೆಯಲು ನಕಲಿ ಮೆಡಿಕಲ್ ಸರ್ಟಿಫಿಕೆಟ್ ಸಲ್ಲಿಸಿ ಯಡವಟ್ಟು ಮಾಡಿಕೊಂಡಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಂಡಕ್ಟರ್ ಹಾಗೂ ಡ್ರೈವರ್ಗಳು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರುವ ಪರಿಸ್ಥಿತಿ ನಿರ್ಮಾಣಗಿದೆ.
ರಜೆ ಪಡೆಯಲು ನಕಲಿ ಸರ್ಟಿಫಿಕೆಟ್ : ಬಿಎಂಟಿಸಿ ನೌಕರರ ವಿರುದ್ಧ ಎಫ್ಐಆರ್
ಬಿಎಂಟಿಸಿಯಲ್ಲಿ ಕೆಲಸ ನಿರ್ವಹಿಸುವ ಡ್ರೈವರ್ ಹಾಗೂ ಕಂಡಕ್ಟರ್ಗಳು ರಜೆ ಪಡೆಯಲು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ವೈದ್ಯರ ಹೆಸರಿನಲ್ಲಿ ನಕಲಿ ಮೆಡಿಕಲ್ ಸರ್ಟಿಫಿಕೇಟ್ ತಯಾರಿಸಿ ಅಧಿಕಾರಿಗಳಿಗೆ ಸಲ್ಲಿಸಿ ರಜೆ ಪಡೆದ ಆರೋಪ ಕೇಳಿ ಬಂದಿದೆ.
ಬಿಎಂಟಿಸಿಯಲ್ಲಿ ಕೆಲಸ ನಿರ್ವಹಿಸುವ ಡ್ರೈವರ್ ಹಾಗೂ ಕಂಡಕ್ಟರ್ಗಳು ರಜೆ ಪಡೆಯಲು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ವೈದ್ಯರ ಹೆಸರಿನಲ್ಲಿ ನಕಲಿ ಮೆಡಿಕಲ್ ಸರ್ಟಿಫಿಕೇಟ್ ತಯಾರಿಸಿ ಅಧಿಕಾರಿಗಳಿಗೆ ಸಲ್ಲಿಸಿ ರಜೆ ಪಡೆದಿದ್ದಾರೆ.
ಈ ವಿಷಯ ಗೊತ್ತಾಗುತ್ತಿದ್ದಂತೆ ಸೆಕ್ಯುರಿಟಿ ಮತ್ತು ವಿಜಿಲೆನ್ಸ್ ಅಧಿಕಾರಿ ಸ್ಮಿತಾ ವಿಲ್ಸನ್ ಗಾರ್ಡನ್ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಎರಡರಿಂದ ಐದು ಜನರ ತಂಡ ಈ ರೀತಿ ನಕಲಿ ಸರ್ಟಿಫಿಕೆಟ್ ಮಾಡಿಸಿದ್ದು, ಎಲ್ಲರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು, 18 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಿ 18 ಮಂದಿಗೂ ನೋಟಿಸ್ ಜಾರಿಗೊಳಿಸಿ ತನಿಖೆ ಮುಂದುವರೆಸಿದ್ದಾರೆ.