ಬೆಂಗಳೂರು:ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆಗೆ ಹಿರಿಯ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿರುವುದು ದುರದೃಷ್ಟಕರ ಎಂದು ಭಾರತೀಯ ಆಡಳಿತ ಸೇವಾ ಅಧಿಕಾರಿಗಳ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಹೊರಡಿಸಿರುವ ಸಂಘ, ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಅದನ್ನು ಜಿಲ್ಲೆಯ ಅಧಿಕಾರಿಗಳು ಶಕ್ತಿ ಮೀರಿ ಜಾರಿಗೊಳಿಸುತ್ತಿದ್ದಾರೆ. ಮೈಸೂರು ಸಿಇಒ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಅಧಿಕಾರಿಗಳ ನೈತಿಕತೆಯನ್ನು ಕುಂದಿಸುತ್ತದೆ. ಮತ್ತು ಆಡಳಿತಾತ್ಮಕ ದಕ್ಷತೆಯನ್ನು ಕ್ಷೀಣಿಸುವಂತೆ ಮಾಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.