ಬೆಂಗಳೂರು:ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿ ಪರವಾಗಿ B-Form ಸ್ವೀಕರಿಸಿದ ಸರ್ಕಾರಿ ಅಧಿಕಾರಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾಧಿಕಾರಿ ವಿಜಯ್ ಕುಮಾರ್ ಎಂಬುವರು ನೀಡಿದ ದೂರಿನ ಮೇರೆಗೆ Excise inspector ಬಿ.ಎಂ.ಸುನೀಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪರ B-form ಪಡೆದಿದ್ದ ಅಬಕಾರಿ ಇನ್ಸ್ಪೆಕ್ಟರ್ ವಿರುದ್ದ ಎಫ್ಐಆರ್ - ಕರ್ನಾಟಕ ಕೌನ್ಸಿಲ್ ಎಲೆಕ್ಷನ್,
ಕಾಂಗ್ರೆಸ್ ಅಭ್ಯರ್ಥಿ ಪರ B-Form ಪಡೆದಿದ್ದ ಅಬಕಾರಿ ಇನ್ಸ್ಪೆಕ್ಟರ್ ವಿರುದ್ದ ಎಫ್ಐಆರ್ ದಾಖಲಾಗಿದೆ.
ಅಬಕಾರಿ ಇನ್ಸ್ಪೆಕ್ಟರ್ ವಿರುದ್ದ ಎಫ್ಐಆರ್
ಚಿಕ್ಕಮಗಳೂರು ವಿಧಾನ ಪರಿಷತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಪರವಾಗಿ ಕೆಪಿಸಿಸಿ ಕಚೇರಿಯಲ್ಲಿ ಬಿ-ಫಾರ್ಮ್ ಪಡೆದಿದ್ದರು. ಅಲ್ಲದೇ ಬಿ-ಫಾರ್ಮ್ ಪಡೆದಿರುವುದನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಚುನಾನಣಾ ನೀತಿ ಸಂಹಿತೆ ಉಲ್ಲಂಘನೆ ಕಂಡು ಬಂದಿದ್ದರಿಂದ ಚುನಾವಣ ಆಯೋಗ ಸುನೀಲ್ ವಿರುದ್ಧ ದೂರು ನೀಡಿದೆ.