ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣಾ ಪ್ರಚಾರ ವೇಳೆ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದಡಿ ಬಿಜೆಪಿ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಸೇರಿ ಹಲವರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: ಮಾಜಿ ಕಾರ್ಪೋರೇಟರ್ ವಿರುದ್ಧ ಎಫ್ಐಆರ್
ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಆರೋಪದಡಿ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್, ವಸಂತ, ಆಯುಬ್, ಮುರಳಿ ಹಾಗೂ ಆನಂದ್ ವಿರುದ್ಧ ಪ್ರಕರಣ ದಾಖಲಾಗಿದೆ.
ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್, ವಸಂತ, ಆಯುಬ್, ಮುರಳಿ ಹಾಗೂ ಆನಂದ್ ವಿರುದ್ಧ ಪ್ರಕರಣ ದಾಖಲಾಗಿದೆ. ಲಕ್ಷ್ಮಿದೇವಿ ನಗರ ವಾರ್ಡ್ನ ಕಾವೇರಿ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಕುಸುಮಾ ಪರವಾಗಿ ಪ್ರಚಾರ ನಡೆಸುತ್ತಿದ್ದರು. ಕಾಂಗ್ರೆಸ್ ವಾರ್ಡ್ ಅಧ್ಯಕ್ಷರಾದ ಜವರೇಗೌಡ, ಕಾರ್ಯಕರ್ತರಾದ ಚಿಕ್ಕರಾಜು, ರಾಕೇಶ್, ವಿನೋದ್, ರೂಪೇಶ್, ಮಾಲಿಕ್ ಮತ್ತು ಇತರೆ ಮುಖಂಡರ ಮೇಲೆ ಬಿಜೆಪಿ ಅಭ್ಯರ್ಥಿ ಮುನಿರತ್ನಂ ನಾಯ್ಡು ಬೆಂಬಲಿಗ ವೇಲು ನಾಯ್ಕರ್ ಮತ್ತು 30 ಕ್ಕೂ ಹೆಚ್ಚು ಗೂಂಡಾಗಳು ಹಲ್ಲೆ ನಡೆಸಿದ್ದಾರೆಂಬ ಆರೋಪವಿದೆ.
ಅಲ್ಲದೆ ಬೂತ್ ಮಟ್ಟದಲ್ಲಿ ಮತದಾರರಿಗೆ ಗುರುತಿನ ಚೀಟಿ ವಿತರಣೆ ನಡೆಸಲು ಸಂಗ್ರಹಿಸಿದ್ದ ಮಾಹಿತಿ ಪುಸ್ತಕ ಹರಿದು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಕಾಂಗ್ರೆಸ್ ಹಿರಿಯ ನಾಯಕರು ಬೆಂಗಳೂರಿನ ನಂದಿನಿ ಲೇಔಟ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿದ್ದರು.