ಕರ್ನಾಟಕ

karnataka

ETV Bharat / state

ಬೆಂಗಳೂರಲ್ಲಿ ಅಕ್ರಮವಾಗಿ ಬಂಧಿಸಿ ಮಹಿಳೆಗೆ ಕಿರುಕುಳ ಆರೋಪ: ಇನ್‌ಸ್ಪೆಕ್ಟರ್​ ಸೇರಿ ನಾಲ್ವರ ವಿರುದ್ಧ ಪ್ರಕರಣ - ನಾಲ್ವರು ಪೊಲೀಸರ ವಿರುದ್ಧ ಪ್ರಕರಣ

ಅಕ್ರಮವಾಗಿ ಬಂಧಿಸಿ ಕಿರುಕುಳ ನೀಡಿದ್ದಾರೆ ಎಂದು ವಿಜಯನಗರದ 42 ವರ್ಷದ ಮಹಿಳೆ ದೂರು ನೀಡಿದ್ದರು. ಈ ಹಿನ್ನೆಲೆ ಇನ್‌ಸ್ಪೆಕ್ಟರ್, ಪಿಎಸ್‌ಐ ಸೇರಿದಂತೆ ನಾಲ್ವರು ಪೊಲೀಸರ ವಿರುದ್ಧ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

FIR against four police staff
ರುಕುಳ ನೀಡಿದ ಆರೋಪ: ಇನ್‌ಸ್ಪೆಕ್ಟರ್​ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ

By

Published : Nov 2, 2020, 8:25 AM IST

ಬೆಂಗಳೂರು: ಮಹಿಳೆಯನ್ನು ಅಕ್ರಮವಾಗಿ ಬಂಧಿಸಿ ಕಿರುಕುಳ ನೀಡಿದ ಆರೋಪದಡಿ ಇನ್ಸ್​ಪೆಕ್ಟರ್ ಸೇರಿದಂತೆ ನಾಲ್ವರ ವಿರುದ್ಧ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯನಗರದ 42 ವರ್ಷದ ಮಹಿಳೆ ನೀಡಿದ ದೂರಿನ ಮೇರೆಗೆ ಹಿಂದೆ ಇದೇ ಠಾಣೆಯ ಪೊಲೀಸ್ ಇನ್ಸ್​ಪೆಕ್ಟರ್ ಭರತ್, ಪಿಎಸ್​ಐ ಸಂತೋಷ್ ಕುಮಾರ್, ಅಕ್ಷಯ ಹಾಗೂ ಮುಖ್ಯಪೇದೆ ಲಿಂಗರಾಜ್ ವಿರುದ್ಧ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ‌. ಪ್ರಕರಣ ಸಂಬಂಧ‌ ಕರೆ ಮಾಡಿ ಠಾಣೆಗೆ ಕರೆಯಿಸಿಕೊಂಡು ಇಡೀ ರಾತ್ರಿ ಠಾಣೆಯಲ್ಲಿ‌ ಇರಿಸಿಕೊಂಡಿದ್ದರು. ಬಳಿಕ ಮಾರನೇ ದಿನ ನ್ಯಾಯಾಲಯಕ್ಕೆ ಹಾಜರುಪಡಿಸಿ 7 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದರು. ವಿಚಾರಣೆ ವೇಳೆ‌ ಅವಾಚ್ಯವಾಗಿ ನಿಂದಿಸಿ ಸುಳ್ಳು ಹೇಳಿಕೆ ದಾಖಿಸಿಕೊಂಡಿದ್ದರು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಮಕ್ಕಳ ಮೇಲೆ ಕ್ರಿಮಿನಲ್‌ ಕೇಸ್ ದಾಖಲಿಸುವುದಾಗಿ ಬೆದರಿಸಿದ್ದರು ಎಂದು ಮಹಿಳೆ ಆರೋಪಿಸಿದ್ದಾಳೆ‌.

ತಮಗಾದ ಅನ್ಯಾಯದ ಬಗ್ಗೆ ಪೊಲೀಸ್ ಕಮಿಷನರ್, ಪಶ್ಚಿಮ ವಿಭಾಗದ ಡಿಸಿಪಿ, ರಾಜ್ಯ ಮಹಿಳಾ ಆಯೋಗ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಮಹಿಳೆ ದೂರು ನೀಡಿದ್ದರು. ಈ ಕುರಿತು ನ್ಯಾಯಾಲಯದಲ್ಲಿಯೂ ಖಾಸಗಿ ಮೊಕದ್ದಮೆ ಹೂಡಲಾಗಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ನಿರ್ದೇಶನ ನೀಡಿದೆ.

ABOUT THE AUTHOR

...view details