ಕರ್ನಾಟಕ

karnataka

ETV Bharat / state

ಕೋವಿಡ್ ಸೋಂಕಿತೆಗೆ ಚಿಕಿತ್ಸೆ ನಿರಾಕರಣೆ: ಖಾಸಗಿ ಆಸ್ಪತ್ರೆ ವಿರುದ್ಧ FIR - ಚಿಕಿತ್ಸೆ ನಿರಾಕರಣೆ

ಮಣಿಪಾಲ್ ಆಸ್ಪತ್ರೆ ವಿರುದ್ಧ ಜೀವನ್ ಭೀಮಾ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಆಸ್ಪತ್ರೆಯ ನೋಡಲ್ ಅಧಿಕಾರಿ ರವೀಂದ್ರ ಕುಮಾರ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.

fir
fir

By

Published : May 13, 2021, 3:06 AM IST

ಬೆಂಗಳೂರು:ಕೋವಿಡ್ ಸೋಂಕಿತರೊಬ್ಬರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಮಣಿಪಾಲ್ ಆಸ್ಪತ್ರೆ ವಿರುದ್ಧ ಜೀವನ್ ಭೀಮಾ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಆಸ್ಪತ್ರೆಯ ನೋಡಲ್ ಅಧಿಕಾರಿ ರವೀಂದ್ರ ಕುಮಾರ್ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.

ವೈದ್ಯೆ, ರೋಗಿ ಆರೈಕೆ ಸಿಬ್ಬಂದಿ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಿಬಿಎಂಪಿ ನಿರ್ದೇಶನದಂತೆ ಮಾ.29ರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ಸೋಂಕಿತರೊಬ್ಬರು ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಎರಡೇ ಗಂಟೆಗಳಲ್ಲಿ ವೈದ್ಯರು ಡಿಸ್ಚಾರ್ಜ್ ಮಾಡಿದ್ದರು.

ಸರಿಯಾದ ಚಿಕಿತ್ಸೆ ಇಲ್ಲದೆ 2 ದಿನಗಳ ಬಳಿಕ ಕೊರೊನಾ ಸೋಂಕಿತೆ ಮನೆಯಲ್ಲಿ ಮೃತಪಟ್ಟರು. ಆಸ್ಪತ್ರೆಯ ನಿರ್ಲಕ್ಷ್ಯವನ್ನು ಕುಟುಂಬಸ್ಥರು ನೋಡಲ್ ಅಧಿಕಾರಿಗಳ ಗಮನಕ್ಕೆ ತಂದಿದ್ದರು.

ಘಟನೆ ಕುರಿತು ನೋಡಲ್ ಅಧಿಕಾರಿಗಳ ತಂಡ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯ ಸಾಬೀತಾಗಿದ್ದು, ಆಸ್ಪತ್ರೆ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ.

ABOUT THE AUTHOR

...view details