ಬೆಂಗಳೂರು: ರಾಘವೇಂದ್ರ ಡಿ. ಚನ್ನಣ್ಣನವರ್ ವಿರುದ್ಧ ಪತ್ನಿಗೆ ಕಿರುಕುಳ ಆರೋಪ ಪ್ರಕರಣ ಕೇಳಿಬಂದಿದ್ದು, ನಗರದ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ರಾಘವೇಂದ್ರ 2015ರಲ್ಲಿ ರೋಜಾ ಎಂಬಾಕೆಯನ್ನು ಮದುವೆಯಾಗಿದ್ದರು.
'ನನ್ನನ್ನು ಮದುವೆಯಾಗುವುದಕ್ಕೂ ಮುನ್ನ ಮತ್ತೊಬ್ಬ ಮಹಿಳೆಯನ್ನು ರಾಘವೇಂದ್ರ ಮದುವೆಯಾಗಿದ್ದಾರೆ. ಈ ವಿಚಾರ ಬಚ್ಚಿಟ್ಟು ನನ್ನನ್ನು ಮದುವೆಯಾದರು' ರೋಜಾ ಆರೋಪಿಸಿದ್ದಾರೆ. ಇದೇ ವೇಳೆ, ಹೊಂದಿಕೊಂಡು ಬಾಳುವಂತೆ ತಮಗೆ ಒತ್ತಾಯಿಸುತ್ತಿರುವುದಾಗಿಯೂ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.