ಬೆಂಗಳೂರು :ರಾಮನಗರ ರೇಷ್ಮೆ ಮಾರುಕಟ್ಟೆಯಲ್ಲಿ ರೈತನ ಮೇಲೆ ದೌರ್ಜನ್ಯ ಎಸಗಿದ್ದ ರೀಲರ್ ವಿರುದ್ಧ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರ ಸೂಚನೆಯಂತೆ ಕೇಸ್ ದಾಖಲಾಗಿದೆ.
ಜನವರಿ 13ರಂದು ಹಾವೇರಿ ಮೂಲದ ವಿರೂಪಾಕ್ಷಪ್ಪ ಎಂಬುವರು ರಾಮನಗರ ಮಾರುಕಟ್ಟೆಗೆ ರೇಷ್ಮೆಗೂಡನ್ನು ತಂದಿದ್ದರು. ಹರಾಜಿನಲ್ಲಿ ರೇಷ್ಮೆ ಗೂಡು ಖರೀದಿಸಿದ್ದ ಮುನೀರ್ ಅಹ್ಮದ್ ಎಂಬ ರೀಲರ್ ರೈತನ ಮೇಲೆ ದೌರ್ಜನ್ಯ ಎಸಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ್ದ ವಿಡಿಯೋ ವೈರಲ್ ಆಗಿತ್ತು.
ವಿಚಾರ ತಮ್ಮ ಗಮನಕ್ಕೆ ಬರುತ್ತಿದ್ದಂತೆ ಕೊರೊನಾ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಾ.ನಾರಾಯಣಗೌಡರು ಆಸ್ಪತ್ರೆಯಿಂದಲೇ ಅಧಿಕಾರಿಗಳ ಜೊತೆ ಮಾತನಾಡಿ ಕೂಡಲೇ ಆತನ ವಿರುದ್ಧ ಕೇಸ್ ದಾಖಲಿಸುವಂತೆ ಸೂಚಿಸಿದ್ದರು. ಅದರಂತೆ ರಾಮನಗರದ ಐಜೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.