ಬೆಂಗಳೂರು: ಹಲ್ಲೆ ಆರೋಪ ಕೇಳಿ ಬಂದ ಹಿನ್ನೆಲೆ ತಾವು ಕಾರ್ಯನಿರ್ವಹಿಸುತ್ತಿದ್ದ ಠಾಣೆಯಲ್ಲೇ ಇನ್ಸ್ಪೆಕ್ಟರ್ ವಿರುದ್ಧ ಎಫ್ಐಆರ್ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.
ತಾವು ಡ್ಯೂಟಿ ಮಾಡುವ ಠಾಣೆಯಲ್ಲೇ ಇನ್ಸ್ಪೆಕ್ಟರ್ ವಿರುದ್ಧ ಎಫ್ಐಆರ್!
ಹಲ್ಲೆ ಪ್ರಕರಣ ಸಂಬಂಧ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ವಿರುದ್ದ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಹೌದು, ಶಿವಾಜಿನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಿದ್ದರಾಜು ಮತ್ತು ನಾಲ್ಕು ಪೊಲೀಸರ ಮೇಲೆ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಕೆಲ ದಿನಗಳ ಹಿಂದೆ ಪ್ರಕರಣವೊಂದರ ಸಂಬಂಧ ವಸೀಂ ಪಾಷಾನನ್ನು ಶಿವಾಜಿನಗರ ಠಾಣೆಗೆ ಇನ್ಸ್ಪೆಕ್ಟರ್ ಕರೆಸಿ, ಆತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಬಳಿಕ ವಸೀಂ ತನ್ನ ತಲೆಗೆ ಬಲವಾಗಿ ದೊಣ್ಣೆಯಿಂದ ಪೊಲೀಸರು ಹೊಡೆದಿರುವ ಫೋಟೊ ಸಮೇತ ಕಮೀಷನರ್ ಹಾಗೂ ನ್ಯಾಯಾಲಯಕ್ಕೆ ದೂರು ನೀಡಿದ್ದರು.
ಸದ್ಯ ನ್ಯಾಯಾಲಯದ ನಿರ್ದೇಶನದಂತೆ ಇನ್ಸ್ಪೆಕ್ಟರ್ ಸಿದ್ದರಾಜು ಹಾಗೂ ನಾಲ್ವರು ಪೊಲೀಸ್ರ ಮೇಲೆ ಎಫ್ಐಆರ್ ದಾಖಲಾಗಿದ್ದು, ಅದೇ ಠಾಣೆಯಿಂದ ತನಿಖೆ ಮುಂದುವರೆದಿದೆ.