ಕರ್ನಾಟಕ

karnataka

ETV Bharat / state

ಬೆಂಗಳೂರಿನ ಗೋಡೆಗಳ ಮೇಲೆ 'PAYCM' ಪೋಸ್ಟರ್​.. ದುಷ್ಕರ್ಮಿಗಳ ವಿರುದ್ಧ ಎಫ್ಐಆರ್

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ "ಪೇ-ಸಿಎಂ" ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ.

PAYCM poster
ಪೇ-ಸಿಎಂ ಶೀರ್ಷಿಕೆಯ ಪೋಸ್ಟರ್‌

By

Published : Sep 21, 2022, 1:30 PM IST

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು‌ ಪ್ರತಿಪಕ್ಷಗಳು ಆರೋಪಿಸುತ್ತಲೇ ಬಂದಿವೆ. ಈ ನಿಟ್ಟಿನಲ್ಲಿ ಇನ್ನೊಂದು ಹೆಜ್ಜೆ‌ ಮುಂದೆ ಹೋಗಿರುವ ಕಾಂಗ್ರೆಸ್ ನಗರದ ಗೋಡೆಗಳ‌ ಮೇಲೆ 'ಪೇ-ಸಿಎಂ' ಎಂದು ಕ್ಯೂಆರ್ ಕೋಡ್ ಇರುವ ಪೋಸ್ಟರ್ ಅಂಟಿಸಿದೆ. ಸದ್ಯ ಪೋಸ್ಟರ್ ಅಂಟಿಸಿದವರ ವಿರುದ್ಧ ಕೇಂದ್ರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವುದಾಗಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ನಗರದಾದ್ಯಂತ ಕ್ಯೂಆರ್ ಕೋಡ್‌ ಇರುವ 'ಪೇ-ಸಿಎಂ' ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರಚಾರ ಚುರುಕುಗೊಳಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾವಚಿತ್ರವಿರುವ "PAY CM" ಶೀರ್ಷಿಕೆಯ ಪೋಸ್ಟರ್‌ಗಳನ್ನು ಎಲ್ಲೆಡೆ ಅಂಟಿಸಲಾಗಿದೆ.

'PAYCM' ಪೋಸ್ಟರ್ ಅಂಟಿಸಿದವರ ವಿರುದ್ಧ ಎಫ್ಐಆರ್ ..

ಈ ಕ್ಯೂಆರ್ ಕೋಡ್​​ನ್ನು ಮೊಬೈಲ್ ಮೂಲಕ ಸ್ಕ್ಯಾನ್ ಮಾಡಿದರೆ ಅದು ಬಳಕೆದಾರರನ್ನು ದೂರುಗಳಿಗಾಗಿ ಇತ್ತೀಚೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ '40% ಕಮಿಷನ್ ಸರ್ಕಾರ' ವೆಬ್‌ಸೈಟ್‌ಗೆ ಕರೆದೊಯ್ಯುತ್ತದೆ. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ 40% ಕಮಿಷನ್ ದಂಧೆ ಹೇಗಿದೆ ಅನ್ನೋದನ್ನು ತೋರಿಸಲು ಈ ಪೋಸ್ಟರ್‌ಗಳನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ:'PAYCM' ಪೋಸ್ಟರ್ ಮೂಲಕ ಬೊಮ್ಮಾಯಿ ಸರ್ಕಾರದ ಲೇವಡಿ ಮಾಡಿದ ಕಾಂಗ್ರೆಸ್!

ABOUT THE AUTHOR

...view details