ಕರ್ನಾಟಕ

karnataka

ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಮೂವರ ವಿರುದ್ಧ ಎಫ್ಐಆರ್

ಬೆಂಗಳೂರಿನಲ್ಲಿ ಕುಟುಂಬಸ್ಥರಿಗೆ ಕೊರೊನಾ ಸೋಂಕು ಇರುವ ಕಾರಣ ಹೋಂ ಕ್ವಾರಂಟೈನ್​ನಲ್ಲಿರುವಂತೆ ಸೂಚಿಸಿದ್ದ ಮೂವರು ನಿಯಮ ಉಲ್ಲಂಘಿಸಿ ಮನೆಯಿಂದ ಹೊರ ಹೋಗಿದ್ದು, ಎಫ್​ಐಆರ್ ದಾಖಲಿಸಲಾಗಿದೆ.

By

Published : Jul 1, 2020, 10:15 AM IST

Published : Jul 1, 2020, 10:15 AM IST

Updated : Jul 1, 2020, 10:20 AM IST

FIR against three who violated quarantine rule in Bengaluru
ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಮೂವರ ವಿರುದ್ದ ಎಫ್ಐಆರ್

ಬೆಂಗಳೂರು : ನಗರದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕಿಗೆ ತುತ್ತಾದವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಿದ್ರೆ, ಮತ್ತೊಂದೆಡೆ ಸೋಂಕಿತರ ಜೊತೆ ಸಂಪರ್ಕ ಹೊಂದಿದವರನ್ನು ಹೋಂ ಕ್ವಾರಂಟೈನ್ ಮಾಡಿ ಮನೆಯಿಂದ ಹೊರ ಹೋಗದಂತೆ ನೋಡಿಕೊಳ್ಳಲಾಗುತ್ತಿದೆ.

ಆದರೆ, ಮೂರು ಪ್ರತ್ಯೇಕ ಪ್ರಕರಣದಲ್ಲಿ ಕ್ವಾರಂಟೈನ್​ ನಿಯಮ ಉಲ್ಲಂಘಿಸಿ ಹೊರಗಡೆ ಓಡಾಡಿದವರ ವಿರುದ್ಧ ಬೇಗೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಗಾರೆಬಾವಿ ಪಾಳ್ಯ ನಿವಾಸಿ‌ ಕೃಷ್ಣ, ಹೊಸಪಾಳ್ಯ ನಿವಾಸಿ ಚಕ್ರಧರ, ಕೂಡ್ಲುಗೇಟ್ ನೋವೆಲ್ ಟೆಕ್ ಪಾರ್ಕ್ ನಿವಾಸಿ ಗೌತಮ್ ಎಂಬುವರ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ.

ಎಫ್ಐಆರ್​ ಪ್ರತಿ

ಈ ಮೂವರ ಕುಟುಂಬಸ್ಥರಿಗೆ ಸೋಂಕು ತಗುಲಿರುವ ಕಾರಣ ಹೋಂ ಕ್ವಾರಂಟೈನ್​ನಲ್ಲಿರುವಂತೆ ಸೂಚಿಸಲಾಗಿತ್ತು. ಆದರೆ, ಇವರು ನಿಯಮ ಉಲ್ಲಂಘಿಸಿ ಮನೆಯಿಂದ ಹೊರ ಹೋಗಿದ್ದು, ಈ ಬಗ್ಗೆ ಸ್ಥಳೀಯರು ಬಿಬಿಎಂಪಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳು ಕ್ವಾರಂಟೈನ್​​ನಲ್ಲಿ​ ಇದ್ದ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಪರಿಶೀಲನೆ‌ ಮಾಡಿದಾಗ ಮೂವರು ಹೊರ ಹೋಗಿರುವುದು ಗೊತ್ತಾಗಿದೆ‌. ಬಿಬಿಎಂಪಿ ಅಧಿಕಾರಿಗಳ ದೂರಿನ ಮೇರೆಗೆ ಸರ್ಕಾರಿ ಆದೇಶ ಉಲ್ಲಂಘನೆಯಡಿ ಎಫ್ಐಆರ್ ದಾಖಲು‌ ಮಾಡಿ ತನಿಖೆ ಮುಂದುವರಿಸಲಾಗಿದೆ.

Last Updated : Jul 1, 2020, 10:20 AM IST

For All Latest Updates

TAGGED:

ABOUT THE AUTHOR

...view details