ಕರ್ನಾಟಕ

karnataka

ETV Bharat / state

ಯಡಿಯೂರಪ್ಪ, ಪುತ್ರ ವಿಜಯೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ - ವಿಜಯೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್

ಮಾಜಿ ಸಿಎಂ ಯಡಿಯೂರಪ್ಪಗೆ ಮತ್ತೆ ಕಂಟಕ. ಬಿಎಸ್​ ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ ಎಫ್​ಐಆರ್ ದಾಖಲು.

ಲೋಕಾಯುಕ್ತದಲ್ಲಿ ಎಫ್ಐಆರ್
ಲೋಕಾಯುಕ್ತದಲ್ಲಿ ಎಫ್ಐಆರ್

By

Published : Sep 17, 2022, 6:55 PM IST

ಬೆಂಗಳೂರು:ಭ್ರಷ್ಟಾಚಾರ ಆರೋಪದಡಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ ನ್ಯಾಯಾಲಯದ ನಿರ್ದೇಶನದಂತೆ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ.

ಯಡಿಯೂರಪ್ಪ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್:ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.

ದೂರನ್ನ ಮರುಪರಿಶೀಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಬಳಿಕ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆಗೆ ಮುಂದಾಗಿರುವ ಲೋಕಾಯುಕ್ತ ಎಫ್ಐಆರ್ ದಾಖಲಿಸಿಕೊಂಡಿದೆ.

(ಇದನ್ನೂ ಓದಿ: ಲೋಕಾಯುಕ್ತಕ್ಕೆ ಬಿಎಸ್​ವೈ ಕೇಸ್ ಶಿಫ್ಟ್: ಸತ್ಯಾಂಶ ಹೊರಬರಬೇಕೆಂದರು ಸಂತೋಷ್ ಹೆಗ್ಡೆ)

ABOUT THE AUTHOR

...view details