ಬೆಂಗಳೂರು: ಕನ್ನಡದ ಹಿರಿಯ ನಟ, ನಿರ್ಮಾಪಕ ಜೈ ಜಗದೀಶ್ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಅರ್ ದಾಖಲಾಗಿದೆ.
ನಟ, ನಿರ್ಮಾಪಕ ಜೈಜಗದೀಶ್ ವಿರುದ್ಧ ಎಫ್ಐಆರ್ ದಾಖಲು - ಮಾಜಿ ಅಧ್ಯಕ್ಷ ಸಾ ರಾ ಗೋವಿಂದು
ಚಲನಚಿತ್ರ ಕಲಾವಿದರಿಗೆ ದಿನಸಿ ವಿತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ. ರಾ. ಗೋವಿಂದು ಅವರನ್ನು ನಿಂದಿಸಿರುವ ಆರೋಪದಡಿ ಜೈಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿದೆ.
ಚಲನಚಿತ್ರ ಕಲಾವಿದರಿಗೆ ದಿನಸಿ ವಿತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ. ರಾ. ಗೋವಿಂದು ಅವರನ್ನು ನಿಂದಿಸಿರುವ ಆರೋಪದಡಿ ಜೈಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿದೆ.
ಲಾಕ್‌ಡೌನ್ ಹಿನ್ನೆಲೆ ನಿರ್ಗತಿಕರಿಗೆ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಮಾಡುತ್ತಿದ್ದೇವೆ. ಇಂತಹ ಸಂಧರ್ಭದಲ್ಲಿ ಜೈ ಜಗದೀಶ್ ಇಲ್ಲಸಲ್ಲದ ಆರೋಪ ಮಾಡಿ ನಿಂದಿಸಿರುವ ಆಡಿಯೋ ಎಲ್ಲೆಡೆ ವೈರಲ್ ಆಗಿದೆ. ಇದರಿಂದ ತಮ್ಮ ಗೌರವಕ್ಕೆ ಧಕ್ಕೆ ಉಂಟಾಗಿದೆ ಎಂದು ಆರೋಪಿಸಿ ಜೈಜಗದೀಶ್ ವಿರುದ್ದ ಸಾ. ರಾ. ಗೋವಿಂದು ಅವರು ದೂರು ನೀಡಿದ್ದರು. ಈ ಹಿನ್ನೆಲೆ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಜೈ ಜಗದೀಶ್ ವಿರುದ್ಧ ಪ್ರಕರಣ ದಾಖಲಾಗಿದೆ.