ಕರ್ನಾಟಕ

karnataka

ETV Bharat / state

ಕ್ಯಾಸಿನೋ ಆರೋಪ: ಸಂಬರಗಿ ವಿರುದ್ಧ ಶಾಸಕ ಜಮೀರ್ ದೂರು - bangalore latest news

ಶಾಸಕ ಜಮೀರ್ ಅಹ್ಮದ್ ಹಾಗೂ ಡ್ರಗ್ಸ್​​ ಪ್ರಕರಣದಲ್ಲಿ ಸಿಲುಕಿರುವ ನಟಿ ಸಂಜನಾ ಗಲ್ರಾನಿ ಶ್ರೀಲಂಕಾದ ಕ್ಯಾಸಿನೋಗೆ ತೆರಳಿದ್ದರು ಎಂದು ಆರೋಪಿಸಿದ್ದರು. ಈ ಸಂಬಂಧ ಪ್ರಶಾಂತ್​ ಸಂಬರಗಿ ವಿರುದ್ಧ ಶಾಸಕ ಜಮೀರ್ ಎಫ್​ಐಆರ್​ ದಾಖಲಿಸಿದ್ದಾರೆ.

FIR regester aginst the prashanth sambargi
ಸಂಬರಗಿ ವಿರುದ್ಧ ಶಾಸಕ ಜಮೀರ್ ದೂರು

By

Published : Sep 12, 2020, 8:50 PM IST

ಬೆಂಗಳೂರು: ಸಾಮಾಜಿಕ‌ ಹೋರಾಟಗಾರ‌ ಪ್ರಶಾಂತ್ ಸಂಬರಗಿ ವಿರುದ್ಧ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪೊಲೀಸರಿಗೆ ದೂರು ನೀಡಿದ್ದಾರೆ.

ಸಂಬರಗಿ ವಿರುದ್ಧ ಶಾಸಕ ಜಮೀರ್ ದೂರು

ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಸಂಜನಾ ಗಲ್ರಾನಿ ಜೊತೆ ಶಾಸಕ ಜಮೀರ್​ ಅಹ್ಮದ್​ ತಮ್ಮ ಒಡೆತನದಲ್ಲಿರುವ ಶ್ರೀಲಂಕಾದಲ್ಲಿನ ಕ್ಯಾಸಿನೋಗೆ ಹೋಗಿದ್ದರು ಎಂದು ಸಾಮಾಜಿಕ ಜಾಲತಾಣ, ಮಾಧ್ಯಮಗಳಲ್ಲಿ ಶಾಸಕರ ವಿರುದ್ಧ ಅವಹೇಳನೆ ಮಾಡಲಾಗಿದೆ ಎಂದು ದೂರು ದಾಖಲಿಸಲಾಗಿದೆ.

ಸಂಬರಗಿ ವಿರುದ್ಧ ಶಾಸಕ ಜಮೀರ್ ದೂರು

ಇದರಿಂದ ನನಗೆ ಹಾಗೂ‌ ಕುಟುಂಬದ ಗೌರವಕ್ಕೆ ಧಕ್ಕೆಯಾಗಿದೆ. ಅಲ್ಲದೇ ನನ್ನ ವಿರುದ್ಧ ಇಲ್ಲ-ಸಲ್ಲದ ಆರೋಪ ಮಾಡಿ, ಸಾಮಾಜಿಕವಾಗಿ ಸಾರ್ವಜನಿಕ‌ರ ಶಾಂತಿ ಭಂಗ ಉಂಟಾಗಲು ಕಾರಣರಾಗಿದ್ದಾರೆ ಎಂದು ಆರೋಪಿಸಿ, ದೂರು‌ ನೀಡಿದ್ದಾರೆ.

ಸಂಬರಗಿ ವಿರುದ್ಧ ಶಾಸಕ ಜಮೀರ್ ದೂರು

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಬರಗಿ, ನನ್ನ ವಿರುದ್ಧ ಪ್ರಕರಣ ದಾಖಲಾಗಿರುವುದು ನನ್ನ ಗಮನಕ್ಕೆ ಬಂದಿದ್ದು, ವಕೀಲರ ಮೂಲಕ ಇದಕ್ಕೆ‌ ಉತ್ತರಿಸುತ್ತೇನೆ ಎಂದಿದ್ದಾರೆ.

ABOUT THE AUTHOR

...view details