ಕರ್ನಾಟಕ

karnataka

ETV Bharat / state

ಬೆಂಬಲಿಗರಿಂದ‌ ಸೀರೆ ಹಂಚಿದ ಆರೋಪ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ - ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಮುನಿರತ್ನ ಬೆಂಬಲಿಗರು ಸೀರೆ ಹಂಚುತ್ತಿದ್ದ ಆರೋಪದಡಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಪ್ರಕರಣ ದಾಖಲು ಮಾಡಲಾಗಿದೆ.

ಶಾಸಕ ಮುನಿರತ್ನ
ಶಾಸಕ ಮುನಿರತ್ನ

By

Published : Apr 10, 2023, 9:26 AM IST

Updated : Apr 10, 2023, 11:03 AM IST

ಬೆಂಗಳೂರು: ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಮತದಾರರಿಗೆ‌ ಸೀರೆ ಹಂಚುತ್ತಿದ್ದ ಆರೋಪದಡಿ ಮುನಿರತ್ನ ಬೆಂಬಲಿಗರು ಸೀರೆ ಹಂಚುತ್ತಿದ್ದ ಆಪಾದನೆಯಡಿ ಚುನಾವಣಾ ಆಯೋಗದ ಅಧಿಕಾರಿ‌ ಮನೋಜ್ ಕುಮಾರ್ ನೀಡಿದ ದೂರಿನ ಮೇರೆಗೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ‌.‌

ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್

ಇತ್ತೀಚೆಗೆ ಆರ್.ಆರ್. ನಗರದ ಬಂಗಾರಪ್ಪ ನಗರದಲ್ಲಿ ಮತದಾರರಿಗೆ ಮುನಿರತ್ನ ಬೆಂಬಲಿಗರು ಸೀರೆ ಹಂಚುವಾಗ ಸಿಕ್ಕಿಬಿದ್ದಿದ್ದರು. ಕೋಮುದ್ವೇಷ ಭಾಷಣ ಹಿನ್ನೆಲೆಯಲ್ಲಿ ಸಚಿವ ಮುನಿರತ್ನ ವಿರುದ್ಧ ಆರ್.ಆರ್. ನಗರ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.

ಕಳೆದ ಮಾರ್ಚ್ 31ರಂದು ಖಾಸಗಿ ಸುದ್ದಿವಾಹಿನಿಯಲ್ಲಿ ಅಲ್ಪ ಸಂಖ್ಯಾತ ಕ್ರೈಸ್ತ ಸಮುದಾಯವನ್ನು ಹೊಡೆದು ಓಡಿಸಿ ಎಂದು ಶಾಸಕ ಮುನಿರತ್ನ ಹೇಳಿಕೆ ನೀಡಿದ್ದ ಹಿನ್ನೆಲೆ ಕೋಮುದ್ವೇಷ ಪ್ರಚೋದಿತ ಭಾಷಣದ ಬಗ್ಗೆ ಚುನಾವಣಾಧಿಕಾರಿ ಮನೋಜ್ ಕುಮಾರ್‌ ದೂರು ನೀಡಿದ್ದರು. ಅಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ರೇಣುಕಾಚಾರ್ಯ ವಿರುದ್ಧ ಎಫ್​ಐಆರ್​, ಬೆಂಗಳೂರು: ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಡಿ ಬಿಜೆಪಿ ಶಾಸಕ ರೇಣುಕಾಚಾರ್ಯ ವಿರುದ್ಧ ಏ.7ರಂದು ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚುನಾವಣೆ ನೀತಿಸಂಹಿತೆ ಉಲ್ಲಂಘಿಸಿ ಸಭೆ ನಡೆಸುತ್ತಿದ್ದ ಆರೋಪದಡಿ ಚುನಾವಣಾ ಅಧಿಕಾರಿ ನೀಡಿದ ದೂರಿನನ್ವಯ ರೇಣುಕಾಚಾರ್ಯ ಹಾಗೂ ಸಭೆಯ ಆಯೋಜಕ ವಿರುದ್ಧ ಎಫ್ಐಆರ್ ದಾಖಲಿಸಲಾದೆ.

ಗುರುರಾಜ ಕಲ್ಯಾಣ ಮಂಟಪವೊಂದರಲ್ಲಿ ಸಭೆ ಸೇರಿದ್ದ ವೇಳೆ ಚುನಾವಣಾಧಿಕಾರಿಗಳು ದಾಳಿ ಮಾಡಿ ಶಾಸಕರ ಕಾರ್ಯಕ್ರಮ ನಿಲ್ಲಿಸಿದ್ದರು. ಸಂತೋಷ್ ಎಂಬುವವರ ಹೆಸರಿನಲ್ಲಿ‌ ಕಾರ್ಯಕ್ರಮ ಆಯೋಜನೆಯಾಗಿದ್ದು, ಸಭಿಕರಿಗೆ ಊಟದ ವ್ಯವಸ್ಥೆ ಸಹ ಮಾಡಿರುವುದು ಪರಿಶೀಲನೆ ಸಂದರ್ಭ ಪತ್ತೆಯಾಗಿತ್ತು. ಈ ಹಿನ್ನೆಲೆ ಚುನಾವಣ ಅಧಿಕಾರಿಗಳು ಪ್ರಕಣ ದಾಖಲಿಸಿದ್ದರು.

ಇದನ್ನೂ ಓದಿ:ನೀತಿ ಸಂಹಿತೆ ಉಲ್ಲಂಘಿಸಿ ಸಾರ್ವಜನಿಕ ಸಭೆ; ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್

ಜನಾರ್ದನ ರೆಡ್ಡಿ ವಿರುದ್ಧ ಪ್ರಕರಣ ದಾಖಲು, ಕೊಪ್ಪಳ:ಮಾದರಿ ನೀತಿ ಸಂಹಿತೆ ಉಲ್ಲಂಘನೆಯಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಸೇರಿದಂತೆ ಐವರ ವಿರುದ್ಧ ಕನಕಗಿರಿ ಪೊಲೀಸ್​ ಠಾಣೆಯಲ್ಲಿ ಏ.3ರಂದು ಎಫ್​​ಐಆರ್ ದಾಖಲಾಗಿತ್ತು. ಕನಕಗಿರಿ ವಿಧಾನಸಭಾ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಡಾ.ಚಾರುಲ್ ವೆಂಕಟರಮಣ ದಾಸರಿ ಸಾರ್ವಜನಿಕರಿಗಾಗಿ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದರು. ಕನಕಗಿರಿಯ ಡಾ.ಅಂಬೇಡ್ಕರ್ ವೃತ್ತದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಆಂಬ್ಯುಲೆನ್ಸ್ ಮೇಲೆ ಜನಾರ್ದನ ರೆಡ್ಡಿ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಿ ಅರುಣಾ ಮತ್ತು ಡಾ. ಚಾರುಲ್ ವೆಂಕಟರಮಣ ದಾಸರಿ ಅವರ ಭಾವ ಚಿತ್ರವಿದ್ದ ಕಾರಣ ನೀತಿ ಸಂಹಿತೆ ಉಲ್ಲಂಘನೆಯಡಿ ಕನಕಗಿರಿ ಪೊಲೀಸರು ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.

ಇದನ್ನೂ ಓದಿ:ನೀತಿ ಸಂಹಿತೆ ಉಲ್ಲಂಘನೆ: ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಪ್ರಕರಣ ದಾಖಲು

ಇದನ್ನೂ ಓದಿ:ನೀತಿ ಸಂಹಿತೆ ಉಲ್ಲಂಘಿಸಿ ಸಾರ್ವಜನಿಕ ಸಭೆ; ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್ಐಆರ್

Last Updated : Apr 10, 2023, 11:03 AM IST

ABOUT THE AUTHOR

...view details