ಬೆಂಗಳೂರು:ಗ್ರಂಥಿಗೆ ವ್ಯಾಪಾರ ನಡೆಸುತ್ತಿದ್ದ ಅಂಗಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅಂಗಡಿ ಮಾಲೀಕ ಸಜೀವವಾಗಿ ದಹನವಾಗಿರುವ ಘಟನೆ ನಗರದಲ್ಲಿ ನಡೆದಿದೆ.
35 ವರ್ಷದ ಮನು ಸಾವನ್ನಪ್ಪಿರುವ ಅಂಗಡಿ ಮಾಲೀಕ. ಮಾರ್ಕೆಟ್ ಬಳಿಯ ಅವೆನ್ಯೂ ರಸ್ತೆ ಬದಿ ಕಿರಿದಾದ ಜಾಗದಲ್ಲಿ ಹಲವು ವರ್ಷಗಳಿಂದ ಗ್ರಂಥಿಗೆ ಅಂಗಡಿ ಇಟ್ಟುಕೊಂಡಿದ್ದರು. ಎಂದಿನಂತೆ ಇಂದು ಅಂಗಡಿ ತೆರೆದು ವ್ಯಾಪಾರ ನಡೆಸುತ್ತಿದ್ದ. ಇಂದು ಮಧ್ಯಾಹ್ನ ಸುಮಾರು 1.30ರ ವೇಳೆಗೆ ಅಂಗಡಿ ವೈರಿಂಗ್ನಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ.