ಕರ್ನಾಟಕ

karnataka

ETV Bharat / state

ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ - ರಾಜಾಜಿನಗರ ಪೊಲೀಸರು

ಮೆಟ್ರೋ ನಿಲ್ದಾಣದ ಕೆಳಭಾಗದ ಹೋಟೆಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇದರಿಂದ ಮೆಟ್ರೋ ಹಳಿಗೆ ತೊಂದರೆಯಾಗುವ ಸಾಧ್ಯತೆ ಇತ್ತು, ತಕ್ಷಣ ಹೋಟೆಲ್ ಸಿಬ್ಬಂದಿ ಅಗ್ನಿ ಶಾಮಕ ಸಿಬ್ಬಂಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

bng
ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

By

Published : Dec 11, 2019, 12:48 PM IST

ಬೆಂಗಳೂರು:ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ಇರುವ ಹೋಟೆಲ್​ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಸವಿ ಸಾಗರ್ ಹೋಟೆಲ್​ನ ಚಿಮಣಿಯಲ್ಲಿ ಕಾಣಿಸಿಕೊಂಡ ಬೆಂಕಿ ಸ್ವಲ್ಪ ಹೊತ್ತು ಹೋಟೆಲ್ ಸಿಬ್ಬಂದಿ ಹಾಗೂ ಮೆಟ್ರೋ ಸಿಬ್ಬಂದಿಯನ್ನ ಬೆಚ್ಚಿ ಬೀಳಿಸುವಂತೆ ಮಾಡಿದೆ.

ಮೆಟ್ರೋ ನಿಲ್ದಾಣದ ಕೆಳಭಾಗದಲ್ಲಿ ಈ ಹೋಟೆಲ್ ಇದ್ದು ಹೆಚ್ಚಿನ ಅವಘಡ ಸಂಭವಿಸಿದರೆ ಮೆಟ್ರೋ ಹಳಿಗೆ ತೊಂದರೆಯಾಗುವ ಸಾಧ್ಯತೆ ಇತ್ತು, ತಕ್ಷಣ ಹೋಟೆಲ್ ಸಿಬ್ಬಂದಿ ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಾಜಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details